ಯೋಗಿ ಆದಿತ್ಯನಾಥ್ ಮಾದರಿ ಆಳವಡಿಸಿಕೊಳ್ಳಲು ಮುಂದಾದ ಹಿಮಾಚಲದ ಕಾಂಗ್ರೆಸ್ ಸರ್ಕಾರ
ಅಂಗಡಿಯವರು ಮತ್ತು ಬೀದಿ ಬದಿ ವ್ಯಾಪಾರಿಗಳು ತಮ್ಮ ಗುರುತಿನ ವಿವರಗಳನ್ನು ಪ್ರದರ್ಶಿಸುವಂತೆ ಆದೇಶ ಹೊರಡಿಸಲಾಗಿದೆ ಎಂದು ಹಿಮಾಚಲ ಪ್ರದೇಶದ ಸಚಿವ ಮತ್ತು ಕಾಂಗ್ರೆಸ್ ಮುಖಂಡ ವಿಕ್ರಮಾದಿತ್ಯ ಸಿಂಗ್ ಬುಧವಾರ ಪ್ರಕಟಿಸಿದ್ದಾರೆ. ಲೋಕೋಪಯೋಗಿ, ನಗರಾಭಿವೃದ್ಧಿ ಮತ್ತು ಮಹಾನಗರ ಪಾಲಿಕೆ ಇಲಾಖೆಗಳ ಜಂಟಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಎಲ್ಲಾ ಬೀದಿ ಬದಿ ವ್ಯಾಪಾರಿಗಳು ಆರೋಗ್ಯಕರ ಆಹಾರವನ್ನು ಮಾರಾಟ ಮಾಡುವುದನ್ನು ಖಚಿತಪಡಿಸಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವಿಕ್ರಮಾದಿತ್ಯ ಒತ್ತಿ ಹೇಳಿದ್ದಾರೆ.
ನಾವು ಯುಡಿ (ನಗರಾಭಿವೃದ್ಧಿ) ಮತ್ತು ಮುನ್ಸಿಪಲ್ ಕಾರ್ಪೊರೇಷನ್ ನೊಂದಿಗೆ ಸಭೆ ನಡೆಸಿದ್ದೇವೆ. ಆರೋಗ್ಯಕರ ಆಹಾರವನ್ನು ಮಾರಾಟ ಮಾಡುವುದನ್ನು ಖಚಿತಪಡಿಸಿಕೊಳ್ಳಲು, ಎಲ್ಲಾ ಬೀದಿ ಬದಿ ವ್ಯಾಪಾರಿಗಳಿಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಿಶೇಷವಾಗಿ ಖಾದ್ಯ ವಸ್ತುಗಳನ್ನು ಮಾರಾಟ ಮಾಡುವವರು” ಎಂದು ವಿಕ್ರಮಾದಿತ್ಯ ಹೇಳಿದರು.
ಬೀದಿಗಳಲ್ಲಿ ಮಾರಾಟವಾಗುವ ಆಹಾರದ ನೈರ್ಮಲ್ಯದ ಬಗ್ಗೆ ಜನರು ತಮ್ಮ ಕಳವಳ ಮತ್ತು ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth