ರೈತರ ಟ್ರ್ಯಾಕ್ಟರ್ ಪರೇಡ್ ಸಂದರ್ಭ ಹಿಂಸಾಚಾರ | ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಪ್ರತಿಕ್ರಿಯೆ ಏನು? - Mahanayaka

ರೈತರ ಟ್ರ್ಯಾಕ್ಟರ್ ಪರೇಡ್ ಸಂದರ್ಭ ಹಿಂಸಾಚಾರ | ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಪ್ರತಿಕ್ರಿಯೆ ಏನು?

27/01/2021

ಲಕ್ನೋ: ದೆಹಲಿಯಲ್ಲಿ ರೈತರ ಟ್ರ್ಯಾಕ್ಟರ್ ಪರೇಡ್ ಸಂದರ್ಭದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಹುಜನ ಸಮಾಜ ಪಾರ್ಟಿ(ಬಿಎಸ್ ಪಿ)ಯ ಮುಖ್ಯಸ್ಥೆ ಮಾಯಾವತಿ ಪ್ರತಿಕ್ರಿಯೆ ನೀಡಿದ್ದಾರೆ.

ದೆಹಲಿಯಲ್ಲಿ ನಡೆದ ಹಿಂಸಾಚಾರ ದುರದೃಷ್ಟಕರ ಎಂದು ಮಾಯಾವತಿ ಅವರು ಟ್ವೀಟ್ ಮಾಡಿದ್ದಾರೆ. ಇಂತಹದ್ದೊಂದು ಘಟನೆ ನಡೆಯಬಾರದಿತ್ತು. ಕೇಂದ್ರ ಸರ್ಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರವು ಕೂಡಲೇ ಮೂರ ಕೃಷಿ ಕಾಯ್ದೆಗಳನ್ನು ರದ್ದುಪಡಿಸಬೇಕು. ಈ ಮೂಲಕ ದೀರ್ಘ ಕಾಲದಿಂದ ನಡೆಯುತ್ತಿರುವ ಪ್ರತಿಭಟನೆಯನ್ನು ಮುಕ್ತಾಯಗೊಳಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮಾಯಾವತಿ ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ