ಹಿಂದಿ ಬಗ್ಗೆ ಅಜಯ್ ದೇವಗನ್ ಹೇಳಿಕೆಗೆ ಸಿ.ಟಿ.ರವಿ ಪ್ರತಿಕ್ರಿಯೆ - Mahanayaka

ಹಿಂದಿ ಬಗ್ಗೆ ಅಜಯ್ ದೇವಗನ್ ಹೇಳಿಕೆಗೆ ಸಿ.ಟಿ.ರವಿ ಪ್ರತಿಕ್ರಿಯೆ

c t ravi
28/04/2022


Provided by

ಚಿಕ್ಕಮಗಳೂರು: ನಮಗೆ ನಮ್ಮ ಮಾತೃಭಾಷೆಯೇ ಶ್ರೇಷ್ಠವಾದದ್ದು, ಯಾವುದೇ ಕಾರಣಕ್ಕೂ ನಾವು ಕನ್ನಡಿಗರು ಇನ್ನೊಂದು ಭಾಷೆಯನ್ನು ಅತಿಕ್ರಮಿಸುವರಲ್ಲ,ಬದಲಾಗಿ ಅವರನ್ನ,ಅವರ ಭಾಷೆಯನ್ನ ಗೌರವಿಸುತ್ತೇವೆ ಎಂದು ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.

ಬಾಲಿವುಡ್ ನಟ ಅಜಯ್ ದೇವಗನ್ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ನಮ್ಮ ದೇಶದಲ್ಲಿ ಒಂದು ಭಾಷೆ ಇನ್ನೊಂದು ಭಾಷೆಯನ್ನ ಕೊಂದಿಲ್ಲ, ಕೊಲ್ಲುವುದಿಲ್ಲ ಎಂದು ಅಭಿಪ್ರಾಯಪಟ್ಟರು.

ಭಾಷೆಯನ್ನು ನಾಶಮಾಡಿ ಬೆಳೆಯುವುದು ಪರಕೀಯರಿಂದ ಬಂದಿರುವ ಮನೋಭಾವನೆ ಅವರಿಗಿದೆ. ನಮ್ಮ ದೇಶದಲ್ಲಿರುವ ಶೇಕಡ 48 ರಷ್ಟು ಜನರಿಗೆ ಹಿಂದಿ ಮಾತೃಭಾಷೆಯಾಗಿದೆ. ಹೀಗಾಗಿ ಸಂಪರ್ಕ ಭಾಷೆಯಾಗಿ ಹಿಂದಿಯನ್ನು ಬಳಸಿಕೊಳ್ಳಬಹುದು ಹೊರತು,ಎಂದಿಗೂ ಅದು ನಮ್ಮ ರಾಷ್ಟ್ರಭಾಷೆಯಾಗುವುದಿಲ್ಲ ಎಂದು ಸಿ.ಟಿ.ರವಿ ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮಾರಕಾಸ್ತ್ರಗಳಿಂದ ಕೊಚ್ಚಿ ಬಾಡಿ ಬಿಲ್ಡರ್ ನ ಬರ್ಬರ ಹತ್ಯೆ!

ಬ್ಯಾನರ್‌ ಹಾನಿಗೊಳಿಸಿದ್ದಕ್ಕೆ ಅಪ್ರಾಪ್ತ ಮಕ್ಕಳನ್ನು ಪೋಲಿಸ್ ಠಾಣೆಯಲ್ಲಿ ಕೂರಿಸಿದ ಪೊಲೀಸರು

ಆಟೋರಿಕ್ಷಾ ಸ್ಕೂಟರ್ ಗೆ ಡಿಕ್ಕಿ: ಇಬ್ಬರು ಧರ್ಮಗುರುಗಳಿಗೆ ಗಾಯ

ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ