ಇಸ್ಲಾಂ ತೊರೆದು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸಿಂ ರಿಜ್ವಿ - Mahanayaka
3:42 PM Wednesday 15 - October 2025

ಇಸ್ಲಾಂ ತೊರೆದು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸಿಂ ರಿಜ್ವಿ

vasim rizvi
06/12/2021

ಉತ್ತರಪ್ರದೇಶ: ಇಸ್ಲಾಂನ ಪವಿತ್ರ ಗ್ರಂಥ ಕುರಾನ್ ನ ಕೆಲವು ಆಯ್ದ ಭಾಗಗಳನ್ನು ತೆಗೆದು ಹಾಕಬೇಕು ಎಂದು ವಿವಾದ ಹೊತ್ತಿಸಿದ್ದ ಉತ್ತರ ಪ್ರದೇಶ ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸಿಂ ರಿಜ್ವಿ, ಇಂದು ಇಸ್ಲಾಂ ಧರ್ಮ ತೊರೆದು ಹಿಂದೂ ಧರ್ಮಕ್ಕೆ ಮತಾಂತರವಾಗಿದ್ದಾರೆ.


Provided by

ಘಾಜಿಯಾಬಾದ್ ನಲ್ಲಿರುವ  ದಾಸ್ನಾ ದೇವಿ ದೇಗುಲದಲ್ಲಿ ಅಲ್ಲಿನ ಮುಖ್ಯ ಅರ್ಚಕ ಸ್ವಾಮಿ ಯರಿ ನರ್ಸಿಂಗಾನಂದ ಅವರು ರಿಜ್ವಿ ಅವರಿಗೆ ಹಿಂದುತ್ವ ಬೋಧನೆ ಮಾಡುವ ಮೂಲಕ ಹಿಂದೂ ಧರ್ಮಕ್ಕೆ ಅವರು ಮತಾಂತರಗೊಂಡರು. ಮತಾಂತರಗೊಂಡ ಬಳಿಕ ಅವರಿಗೆ ಹೊಸ ಹೆಸರಿಡಲಾಗಿದ್ದು,  ಜಿತೇಂದ್ರ ನಾರಾಯಣ ಸಿಂಗ್ ತ್ಯಾಗಿ ಎಂದು ಮರು ನಾಮಕರಣ ಮಾಡಲಾಗಿದೆ.

ವಾಸಿಂ ರಿಜ್ವಿ ಇತ್ತೀಚೆಗೆ ಕುರಾನ್ ಹಾಗೂ ಇಸ್ಲಾಂ ಧರ್ಮದ ಮೇಲೆ ಹಾನಿಕಾರಕ ಹಾಗೂ ಅವಹೇಳನಾಕಾರಿ ಹೇಳಿಕೆಯನ್ನು  ನೀಡುತ್ತಿದ್ದರು. ಇದರ ಜೊತೆಗೆ  ಕುರಾನ್ ನಲ್ಲಿರುವ ಕೆಲವು ಆಯ್ದ ಭಾಗಗಳನ್ನು ತೆಗೆದು ಹಾಕಬೇಕು ಎಂದು  ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಈ ಅರ್ಜಿಗೆ ಸುಪ್ರೀಂ ಕೋರ್ಟ್ ಮನ್ನಣೆ ನೀಡಿರಲಿಲ್ಲ.

ಇತ್ತೀಚೆಗಷ್ಟೆ ‘ರಿಜ್ವಿ ಮೊಹಮ್ಮದ್’ ಎಂಬ ಪುಸ್ತಕ ಬಿಡುಗಡೆ ಮಾಡಿ, ಪ್ರವಾದಿ ಬಗ್ಗೆ ಆಕ್ಷೇಪಣೀಯ ಭಾಷೆಗಳನ್ನು ಬಳಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಇದರ ವಿರುದ್ಧ  ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಒವೈಸಿ ಕೂಡ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಅಂತಿಮವಾಗಿ ವಾಸಿಂ ರಿಜ್ವಿ ಹಿಂದೂ ಧರ್ಮಕ್ಕೆ ಸೇರ್ಪಡೆಗೊಂಡಿದ್ದಾರೆ. ಆದರೆ ಅವರು ಯಾವ ಜಾತಿಯಲ್ಲಿ ಮುಂದುವರಿಯಲಿದ್ದಾರೆ ಎನ್ನುವುದು ತಿಳಿದು ಬಂದಿಲ್ಲ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಅಪಾರ್ಟ್ ಮೆಂಟ್ ನ 12ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವು

ಪ್ರಾಂಶುಪಾಲರಿಗೆ ಗುಂಡಿಕ್ಕಿ ಹತ್ಯೆಗೆ ಯತ್ನಿಸಿದ 15ರ ಬಾಲಕ!

ಬಾಬಾಸಾಹೇಬ್ ಅಂಬೇಡ್ಕರ್ ರ ಕೊನೆಯ ಸಂದೇಶ

ಡಾ.ಬಿ.ಆರ್.ಅಂಬೇಡ್ಕರ್ ಮಹಾಪರಿನಿಬ್ಬಾಣ: ಸಿಎಂ ಬಸವರಾಜ್ ಬೊಮ್ಮಾಯಿ ಅವರಿಂದ ನಮನ

ಮಕ್ಕಳನ್ನು ಮನೆಯಲ್ಲಿಯೇ ಬಂಧಿಸಿದ ತಾಯಿ: ಮಕ್ಕಳ ಅಳು ಕೇಳಲಾರದೇ ಸ್ಥಳೀಯರಿಂದ ದೂರು

ಪುನೀತ್ ರಾಜ್ ಕುಮಾರ್ ನಟನೆಯ ‘ಗಂಧದ ಗುಡಿ’ ಟೀಸರ್ ಬಿಡುಗಡೆ: ವಿಡಿಯೋ ನೋಡಿ

ಹಿರಿಯ ನಟ ಶಿವರಾಮ್ ಪಂಚಭೂತಗಳಲ್ಲಿ ಲೀನ: ಬನಶಂಕರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ

ಇತ್ತೀಚಿನ ಸುದ್ದಿ