ಹಿಂದೂ ನಾಯಕ ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

21/08/2025
ಉಡುಪಿ: ಬಿ.ಎಲ್.ಸಂತೋಷ್ ವಿರುದ್ಧ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ನಾಯಕ ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಇಂದು ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಅವರ ನಿವಾಸದಿಂದ ಪೊಲೀಸರು ವಶಕ್ಕೆ ಪಡೆದಿದ್ದರು. ವಿಚಾರಣೆ ಬಳಿಕ ಇಂದು ಸಂಜೆ ಬ್ರಹ್ಮಾವರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ಇನ್ನೂ ನ್ಯಾಯಾಲಯವು ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಇದೇ ವೇಳೆ ಮಹೇಶ್ ಶೆಟ್ಟಿ ತಿಮರೋಡಿ ಅವರು ನ್ಯಾಯಾಲಯಕ್ಕೆ ಸಲ್ಲಿಸಿದ ಜಾಮೀನು ಅರ್ಜಿಯ ವಿಚಾರಣೆಯನ್ನ ಆ.23ರಂದು ವಿಚಾರಣೆ ನಡೆಸಲಿದೆ ಎಂದು ತಿಳಿದು ಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD