ಖಾಸಗಿ ಮಾಹಿತಿ ಬಹಿರಂಗಗೊಳಿಸುವ ಬೆದರಿಕೆ ಆರೋಪ: ಹಿಂದೂ ಮಹಾಸಭಾದ ಮುಖಂಡ ರಾಜೇಶ್ ಪವಿತ್ರನ್ ಅರೆಸ್ಟ್
ಉದ್ಯಮಿಯೊಬ್ಬರ ಖಾಸಗಿ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸುವ ಬೆದರಿಕೆ ಹಾಕಿ, ಚಿನ್ನ ಹಾಗೂ ಹಣಕ್ಕಾಗಿ ಬೇಡಿಕೆ ಇಟ್ಟ ಆರೋಪದ ಮೇಲೆ ಅಖಿಲ ಭಾರತ ಹಿಂದೂ ಮಹಾಸಭಾದ ಕರ್ನಾಟಕ ಘಟಕದ ಅಧ್ಯಕ್ಷ ರಾಜೇಶ್ ಪವಿತ್ರನ್ ಎಂಬುವವರನ್ನು ಸುರತ್ಕಲ್ ಠಾಣೆಯ ಪೊಲೀಸರು ಬುಧವಾರ ರಾತ್ರಿ ಬಂಧಿಸಿದ್ದಾರೆ.
ಕಾವೂರು ನಿವಾಸಿ ಸುರೇಶ್ ಎಂಬುವವರು ಸುರತ್ಕಲ್ ನಲ್ಲಿ ರಾಜೇಶ್ ಪವಿತ್ರನ್ ಜೊತೆ ಪಾಲುದಾರಿಕೆಯಲ್ಲಿ ಸ್ಯಾಫ್ರಾನ್ ಇಂಟರ್ ನ್ಯಾಷನಲ್ ಟ್ರೇಡಿಂಗ್ ಎಂಬ ವ್ಯವಹಾರ ನಡೆಸಲು ಮುಂದಾಗಿದ್ದರು. ಆದರೆ ರಾಜೇಶ್ ಪವಿತ್ರನ್ ಅವ್ಯವಹಾರಗಳು ಗಮನಕ್ಕೆ ಬಂದಿದ್ದರಿಂದ ಪಾಲುದಾರಿಕೆಯಿಂದ ಹೊರ ಬರಲು ನಿರ್ಧರಿಸಿದ್ದರು.
‘ಇದರಿಂದ ಆಕ್ರೋಶಗೊಂಡ ಆರೋಪಿತನು ಸುರೇಶ್ ಅವರ ಲ್ಯಾಪ್ ಟಾಪ್ ವಶಕ್ಕೆ ಪಡೆದು ಹೆಚ್ಚುವರಿ ಹಣ ನೀಡಬೇಕು. ಇಲ್ಲದಿದ್ದಲ್ಲಿ ಅದರಲ್ಲಿರುವ ಎಲ್ಲಾ ಖಾಸಗಿ ಮಾಹಿತಿ ಬಹಿರಂಗಪಡಿಸುತ್ತೇನೆ. ಮಾತ್ರವಲ್ಲ ಕೈ, ಕಾಲು ಕಡಿದು ಹಾಕುತ್ತೇನೆ ಎಂದು ಬೆದರಿಕೆ ಹಾಕಿದ್ದ.
ಈ ಬಗ್ಗೆ ಸುರೇಶ್ ಅವರು ಸುರತ್ಕಲ್ ಠಾಣೆಗೆ ದೂರು ನೀಡಿದ್ದರು. ಅದರ ಆಧಾರದಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆರೋಪಿಗೆ ನೆರವು ನೀಡಿದ ಆರೋಪದಲ್ಲಿ ಮಹಿಳೆಯೋರ್ವರ ವಿರುದ್ಧವೂ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka