ಒಡಿಶಾ ಸಿಎಂ ನಿವೃತ್ತಿ ಬಗ್ಗೆ ಅಮಿತ್ ಶಾ ಮಾತು: ಕೇಂದ್ರ ಗೃಹ ಸಚಿವರ ಕಾಲೆಳೆದ ಪಿ.ಚಿದಂಬರಂ; ಪರೋಕ್ಷವಾಗಿ ಮೋದಿಗೆ ನಿವೃತ್ತಿ ತೆಗೆದುಕೊಳ್ಳಿ ಅಂದ್ರಾ ಶಾ..? - Mahanayaka

ಒಡಿಶಾ ಸಿಎಂ ನಿವೃತ್ತಿ ಬಗ್ಗೆ ಅಮಿತ್ ಶಾ ಮಾತು: ಕೇಂದ್ರ ಗೃಹ ಸಚಿವರ ಕಾಲೆಳೆದ ಪಿ.ಚಿದಂಬರಂ; ಪರೋಕ್ಷವಾಗಿ ಮೋದಿಗೆ ನಿವೃತ್ತಿ ತೆಗೆದುಕೊಳ್ಳಿ ಅಂದ್ರಾ ಶಾ..?

22/05/2024


Provided by

ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ನಿವೃತ್ತಿ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಾತನಾಡಿದ್ದಾರೆ. ಇದು ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿಗೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳಿ ಎಂದು ಸೂಚನೆ ನೀಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ಪಿ ಚಿದಂಬರಂ ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌ನ ಹಿರಿಯ ನಾಯಕ ಪಿ ಚಿದಂಬರಂ, 77 ವರ್ಷ ವಯಸ್ಸಾಗಿರುವ ನವೀನ್‌ ಪಟ್ನಾಯಕ್‌ ರಾಜಕೀಯ ನಿವೃತ್ತಿ ಪಡೆದುಕೊಳ್ಳಬೇಕು ಎಂದು ಮಾತನಾಡಿ 73 ವರ್ಷ 7 ತಿಂಗಳಾಗಿರುವ ಪ್ರಧಾನಿ ನರೇಂದ್ರ ಮೋದಿಗೆ ರಾಜಕೀಯ ನಿವೃತ್ತಿ ಪಡೆಯಿರಿ ಎಂದು ಪರೋಕ್ಷ ಸೂಚನೆ ನೀಡಿದ್ದಾರೆ ಎಂದಿದ್ದಾರೆ.

ಒಂದು ವೇಳೆ ಕೆಂದ್ರದಲ್ಲಿ ಬಿಜೆಪಿ ಅಧಿಕಾರ ರಚಿಸಿದರೆ ಅಮಿತ್‌ ಶಾ ಪ್ರಧಾನಿ ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೆ. ಬಿಜೆಪಿ ಸರ್ಕಾರ ರಚಿಸದಿದ್ದರೆ ಮೋದಿಗಿಂತ ಅಮಿತ್‌ ಶಾ ಹೆಚ್ಚು ಸಂತೋಷ ಪಡುತ್ತಾರೆ. ಹಾಗೆಯೇ ವಿಪಕ್ಷ ನಾಯಕನ ಸ್ಥಾನದಲ್ಲಿ ಕುಳಿತುಕೊಳ್ಳುತ್ತಾರೆ ಎಂದು ಪಿ ಚಿದಂಬರಂ ತಿಳಿಸಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ