10:07 AM Thursday 21 - August 2025

ಕ್ಷುಲ್ಲಕ ಕಾರಣಕ್ಕೆ ಹೊಡೆದಾಟ: 8 ಮಂದಿಯನ್ನು ಬಂಧಿಸಿದ ಪೊಲೀಸರು

arrest
21/07/2022

ಬೆಳ್ಳಾರೆ : ಕ್ಷುಲ್ಲಕ ಕಾರಣಕ್ಕೆ  ನಡೆದ ಹೊಡೆದಾಟದಲ್ಲಿ ಯುವಕನೋರ್ವ ಗಂಭೀರ ಗಾಯಗೊಂಡಿದ್ದು,  ಘಟನೆಗೆ ಸಂಬಂಧಿಸಿದಂತೆ ಬೆಳ್ಳಾರೆ ಠಾಣೆಯ ಪೊಲೀಸರು ಜು. 20ರಂದು ವಶಕ್ಕೆ ಪಡೆದಿದ್ದಾರೆ.

ಕಳೆಂಜ ನಿವಾಸಿ ಮಸೂದ್(21) ಹಲ್ಲೆಗೊಳಗಾದ ಯುವಕನಾಗಿದ್ದು, ಆತನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಧಿತರನ್ನು ಅಭಿಲಾಷ್, ಸುನಿಲ್, ಸುಧೀರ್, ಶಿವ, ರಂಜಿತ್, ಸದಾಶಿವ, ಜಿಮ್ ರಂಜಿತ್, ಭಾಸ್ಕರ ಎಂದು ಗುರುತಿಸಲಾಗಿದೆ.

ಮಸೂದ್ ತಿಂಗಳ ಹಿಂದೆ ಸುಳ್ಯದ ಕಳಂಜಕ್ಕೆ ಬಂದು ಸ್ಥಳೀಯವಾಗಿ ಕೂಲಿ ಕೆಲಸ ಮಾಡುತ್ತಿದ್ದರು. ಜು. 19ರ ಸಂಜೆ ಸುಧೀರ ಎಂಬಾತನಿಗೆ ಮಸೂದ್ ಅಂಗಡಿ ಬಳಿ ತಾಗಿದ ವಿಚಾರದಲ್ಲಿ ಪರಸ್ಪರ ಹೊಡೆದಾಡಿಕೊಂಡಿದ್ದರು. ಮಸೂದ್ ಸುಧೀರನಿಗೆ ಬಾಟಲಿ ತೋರಿಸಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ.

ಇದೇ ವಿಚಾರವಾಗಿ ಬಳಿಕ ರಾಜಿ ಪಂಚಾಯಿತಿಕೆಗೆಂದು ಮಸೂದ್  ನನ್ನು ಕರೆಸಿದ ಮಾತುಕತೆ ವೇಳೆ ಮಾತಿಗೆ ಮಾತು ಬೆಳೆದು ಎಂಟು ಮಂದಿಯ ತಂಡ ಮಸೂದ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು ಎಂದು ದೂರು ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version