ಪಾಕಿಸ್ತಾನದಲ್ಲಿ ಇನ್ಮುಂದೆ ಹೋಳಿ, ಇತರ ಹಬ್ಬಗಳ ಆಚರಣೆ ಬ್ಯಾನ್: ನಿಷೇಧದ ಹಿಂದಿರುವ ಕಾರಣ ಇದು..!

ಇಸ್ಲಾಮಿ ಆಚಾರ-ವಿಚಾರಗಳನ್ನು ಉಳಿಸಿಕೊಳ್ಳಲು, ಪಾಕಿಸ್ತಾನದ ವಿಶ್ವವಿದ್ಯಾನಿಲಯಗಳಲ್ಲಿ ಇನ್ಮುಂದೆ ಹೋಳಿ ಮತ್ತು ಇತರ ಹಬ್ಬಗಳನ್ನು ನಿಷೇಧಿಸಲಾಗಿದೆ.
ಭಾರತದ ವಿಭಜನೆಯ ನಂತರ ಸೃಷ್ಟಿಯಾದ ಪಾಕಿಸ್ತಾನದಲ್ಲಿ ಇಸ್ಲಾಮಿಕ್ ನಿಯಮಗಳು ಮತ್ತು ನಿಬಂಧನೆಗಳಿಂದಾಗಿ ಇತರ ಧರ್ಮದ ಜನರು ಶಾಂತಿಯುತವಾಗಿ ಬದುಕುವುದು ಕಷ್ಟಕರವಾಗಿದೆ. ಇಲ್ಲಿ ಮುಸ್ಲಿಮರಿಗೆ ಹೋಲಿಸಿದರೆ ಹಿಂದೂಗಳು, ಬೌದ್ಧರು ಮತ್ತು ಕ್ರಿಶ್ಚಿಯನ್ನರ ಹಕ್ಕುಗಳು ಕಡಿಮೆಯಾಗುತ್ತಿವೆ. ಇದೀಗ ಅಲ್ಲಿನ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಹೋಳಿ ಆಚರಣೆಯನ್ನು ನಿಷೇಧಿಸಲಾಗಿದೆ. ಅಂದರೆ ಯಾವುದೇ ಶಾಲೆಯಲ್ಲಿ ಹೋಳಿ ಆಚರಣೆ ಮಾಡಲು ಬಿಡುವುದಿಲ್ಲ ಎಂದು ಹೇಳಲಾಗಿದೆ.
ಈ ವರ್ಷ ಹೋಳಿ ಹಬ್ಬದ ಸಂದರ್ಭದಲ್ಲಿ ಪಾಕಿಸ್ತಾನದ ಶಾಲೆಗಳಲ್ಲಿ ಹಿಂದೂಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದ ಸುದ್ದಿ ಮುನ್ನಲೆಗೆ ಬಂದಿತ್ತು. ಹೀಗಾಗಿ ಪಾಕಿಸ್ತಾನದ ಉನ್ನತ ಶಿಕ್ಷಣ ಆಯೋಗವು ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಹೋಳಿ ಆಚರಣೆಯನ್ನು ನಿಷೇಧಿಸಿದೆ ಎಂದು ಪಾಕಿಸ್ತಾನದ ಆಜ್ ನ್ಯೂಸ್ ವರದಿ ಮಾಡಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw