ಹೋಲಿ ಪಾರ್ಟಿಗೆ ಬಜರಂಗದಳ ಕಾರ್ಯಕರ್ತರಿಂದ ದಾಳಿ! - Mahanayaka
12:47 PM Friday 11 - September 2026

ಹೋಲಿ ಪಾರ್ಟಿಗೆ ಬಜರಂಗದಳ ಕಾರ್ಯಕರ್ತರಿಂದ ದಾಳಿ!

mangalore holi
26/03/2023

ಹೋಲಿ ಸಂಭ್ರಮದ ಡಿಜೆ ಪಾರ್ಟಿಗೆ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ಮಂಗಳೂರು ನಗರದ ಮರೋಳಿ ಎಂಬಲ್ಲಿ ನಡೆದಿದೆ.

ರಂಗ್ ದೇ ಬರ್ಸಾ ಹೆಸರಿನಲ್ಲಿ ನಡೆಯುತ್ತಿದ್ದ ಹೋಲಿ ಆಚರಣೆಯಲ್ಲಿ ಡಿಜೆ ಪಾರ್ಟಿ ಜೊತೆಗೆ ಬಣ್ಣ ಎರಚಿಕೊಂಡು ಯುವಕ—ಯುವತಿಯರು ಸಂಭ್ರಮಿಸುತ್ತಿದ್ದರು.

ಇದೇ ವೇಳೆ ಅಶ್ಲೀಲ ವರ್ತನೆ ಆರೋಪಿಸಿ ಹಾಗೂ ಅನ್ಯಕೋಮಿನ ಯುವಕರ ಜೊತೆ ಹೋಲಿ ಆಚರಣೆ ಅಂತ ಆರೋಪಿಸಿ ಭಜರಂಗದಳ ಕಾರ್ಯಕರ್ತರು  ದಾಳಿ ನಡೆಸಿದರು.

ಹೋಲಿ ಸಂಭ್ರಮದ ಬ್ಯಾನರ್ ಹರಿದು ಹಾಕಿ ವಸ್ತುಗಳನ್ನ ಪುಡಿಗೈದು ದಾಂಧಲೆ ನಡೆಸಿದ್ದಾರೆ. ಈ ವೇಳೆ ಭಜರಂಗದಳ ಕಾರ್ಯಕರ್ತರು ಮತ್ತು ಆಯೋಜಕರ ಮಧ್ಯೆ ಮಾತಿನ ಚಕಮಕಿ ಆಗಿದ್ದು, ಆಯೋಜಕರು ಮತ್ತು ಕೆಲವರ ಮೇಲೆ ಬಜರಂಗದಳದ ಕಾರ್ಯಕರ್ತರು ಹಲ್ಲೆಗೂ ಯತ್ನಿಸಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಮಧ್ಯ ಪ್ರವೇಶಿಸಿ ಬಜರಂಗದಳ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti