12:58 PM Saturday 23 - August 2025

ಭಾರೀ ಮಳೆ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂ.27ರಂದು ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

school
26/06/2024

ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜೂನ್ 27ರಂದು ರೆಡ್ ಅಲರ್ಟ್ ಘೋಷಣೆಯಾಗಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆಗಳಿಗೆ ಜೂ. 27ರಂದು ರಜೆ ಘೋಷಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ  ತಿಳಿಸಿದ್ದಾರೆ.

ಮುಂಜಾಗೃತಾ ಕ್ರಮ:

* ಸಂಭಾವ್ಯ ಪ್ರವಾಹ/ಭೂಕುಸಿತ ಪ್ರದೇಶಗಳನ್ನು ಗುರುತಿಸಿ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ

*  ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸುವುದು.

* ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.

* ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿಗಳ/ತೋಡುಗಳ ಸಮೀಪ ಹೋಗದಂತೆ ಎಚ್ಚರಿಕೆವಹಿಸುವುದು.

* ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯತ್/ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿಯನ್ನು ನೀಡುವುದು.

* ಸಂಭಾವ್ಯ ಹಾನಿಯನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಸಾರ್ವಜನಿಕರು ಅಪಾಯಕಾರಿ ಸನ್ನಿವೇಶಗಳಿಂದ ದೂರವಿದ್ದು, ಜಿಲ್ಲಾಡಳಿತದ ಸಲಹೆ/ಸೂಚನೆಗಳನ್ನು ಪಾಲಿಸುವುದು.

* ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ 0824-2442590 ದೂರವಾಣಿಯನ್ನು ಸಂಪರ್ಕಿಸುವುದು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version