ಭಾರೀ ಗಾಳಿ– ಮಳೆ: ಮೂಡಿಗೆರೆ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

28/06/2024
ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಭಾರೀ ಮಳೆ ಹಿನ್ನೆಲೆ ಮೂಡಿಗೆರೆ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಇಂದು ಮಾತ್ರ ಶಾಲೆಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ಪರಮಾನಂದ ಆದೇಶ ಮಾಡಿದ್ದಾರೆ. ಭಾರೀ ಗಾಳಿಯೊಂದಿಗೆ ಬಿಟ್ಟು–ಬಿಟ್ಟು ಸುರಿಯುತ್ತಿರೋ ಮಳೆ ಹಾಗೂ ಭಾರೀ ಗಾಳಿ ಇರೋದ್ರಿಂದ ಮುಂಜಾಗೃತ ಕ್ರಮವಾಗಿ ರಜೆ ಘೋಷಿಸಲಾಗಿದೆ.
ಸರ್ಕಾರಿ–ಖಾಸಗಿಯ 1ರಿಂದ 10ನೇ ತರಗತಿಯ ಎಲ್ಲಾ ಶಲೆಗಳಿಗೆ ರಜೆ ನೀಡಲಾಗಿದೆ. ಪಿಯುಸಿ ಹಾಗೂ ಪದವಿ ಕಾಲೇಜುಗಳು ಎಂದಿನಂತೆ ನಡೆಯಲಿವೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97