ಮಲೆನಾಡು ಭಾಗ 6 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ - Mahanayaka

ಮಲೆನಾಡು ಭಾಗ 6 ತಾಲೂಕುಗಳ ಶಾಲಾ–ಕಾಲೇಜುಗಳಿಗೆ ರಜೆ ಘೋಷಣೆ

school
30/07/2024

ಚಿಕ್ಕಮಗಳೂರು:  ಕಾಫಿನಾಡ ಮಲೆನಾಡು ಭಾಗದಲ್ಲಿ ಧಾರಾಕಾರ ಮ‌ಳೆ‌ ಹಿನ್ನೆಲೆ ನಾಳೆ ಮಲೆನಾಡಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಭಾರೀ ಮಳೆ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ಮಲೆನಾಡು ಭಾಗದ ಆರು ತಾಲೂಕಿನ ಅಂಗನವಾಡಿ, ಶಾಲಾ ಕಾಲೇಜು, ಪದವಿ ಕಾಲೇಜಿಗೂ ರಜೆ ಘೋಷಣೆ ಮಾಡಲಾಗಿದೆ.

ಧಾರಾಕಾರ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ರಜೆ‌‌ ಘೋಷಣೆ ಮಾಡಲಾಗಿದೆ. ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಚಿಕ್ಕಮಗಳೂರು, ತಾಲೂಕಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ‌ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ರಜೆ ನೀಡಿ ಆದೇಶಿಸಿದ್ದಾರೆ.

ಬಯಲುಸೀಮೆ ತಾಲೂಕುಗಳಾದ ಕಡೂರು, ತರೀಕೆರೆ, ಅಜ್ಜಂಪುರಕ್ಕೆ ರಜೆ ಇರುವುದಿಲ್ಲ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.


Provided by
Provided by

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ