5:07 AM Saturday 18 - October 2025

ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕುಗಳ ಶಾಲೆಗಳಿಗೆ ರಜೆ

rain
15/06/2025

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಿಂದ ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿದೆ.

ಮುಂಜಾಗ್ರತಾ ಕ್ರಮವಾಗಿ  ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡಬಿದ್ರೆ, ಮುಲ್ಕಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 16.06.2025ರಂದು ರಜೆಯನ್ನು ಘೋಷಿಸಲಾಗಿರುತ್ತದೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version