ಆಗಸ್ಟ್ 29ರಂದು ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲೆ, ಪಿಯು ಕಾಲೇಜುಗಳಿಗೆ ರಜೆ

school
28/08/2025

ಮಂಗಳೂರು: ಭಾರೀ ಮಳೆ ಹಿನ್ನೆಲೆ ಆಗಸ್ಟ್ 29ರಂದು ಹವಾಮಾನ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದ್ದು, ಹೀಗಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಮುಂಜಾಗೃತಾ ಕ್ರಮಕೈಗೊಂಡಿದೆ.

ಭಾರೀ ಮಳೆಯ ಹಿನ್ನೆಲೆ ಆ.29ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ.

ಆ.28ರಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕವಾಗಿ ಮಳೆಯಾಗಿದ್ದು, ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿತ್ತು. ಗುರುವಾರ ಕೂಡ ದಕ್ಷಿಣ ಕನ್ನಡ ಜಿಲ್ಲೆಯ ಹಲವು ತಾಲೂಕುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version