Fengal Cyclone: ಡಿ.3ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ
02/12/2024
ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತ(Fengal Cyclone)ದ ಪರಿಣಾಮ ವ್ಯಾಪಕ ಗುಡುಗು ಸಹಿತ ಮಳೆಯಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ತುರ್ತು ಕ್ರಮಕೈಗೊಂಡಿದ್ದು, ಡಿಸೆಂಬರ್ 3ರಂದು ಎಲ್ಲ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: