ಇಡಿ ದಾಳಿ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ - Mahanayaka

ಇಡಿ ದಾಳಿ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ

g parameshwar
22/05/2025

ಬೆಂಗಳೂರು: ತುಮಕೂರು ನಗರದಲ್ಲಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಮಾಲಿಕತ್ವದ  ಸಿದ್ದಾರ್ಥ ವಿದ್ಯಾಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಎರಡನೇ ದಿನವೂ ಶೋಧ ಮುಂದುವರೆದಿದೆ. ಈ ನಡುವೆ  ಇಡಿ ದಾಳಿ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ಕಾಲೇಜಿಗೆ ಬಂದು ಅಕೌಂಟ್ಸ್ ಮಾಹಿತಿ ಕೇಳಿದ್ದಾರೆ. ಆ ಮಾಹಿತಿಯನ್ನು ನಾವು ನೀಡಿದ್ದೇವೆ. ಇಡಿ ಅಧಿಕಾರಿಗಳು ಯಾವುದೇ ಮಾಹಿತಿ ಕೇಳಿದರೂ ನೀಡಿ ಎಂದು ನಮ್ಮ ಸಿಬ್ಬಂದಿಗೆ ತಿಳಿಸಿದ್ದೇನೆ ಎಂದು ಡಾ.ಜಿ.ಪರಮೇಶ್ವರ್ ತಿಳಿಸಿದರು.

ನಿನ್ನೆ ಇಡಿ ದೆಹಲಿಯ ಅಧಿಕಾರಿಗಳು ನಮ್ಮ ಮೂರು ಕಾಲೇಜುಗಳಿಗೆ ಭೇಟಿ ಕೊಟ್ಟಿದ್ದಾರೆ. ಅವರಿಗೆ ಏನು ಸೂಚನೆ ಬಂದಿದೆಯೋ ಗೊತ್ತಿಲ್ಲ. ಅವರು ಕೇಳಿದ ದಾಖಲೆಗಳನ್ನು ನಾವು ಕೊಡುತ್ತೇವೆ ಎಂದರು.

ಇಡಿ ದಾಳಿಯ ಉದ್ದೇಶ ಗೊತ್ತಿಲ್ಲ. ಅವರಿಗೆ ಸಹಕಾರ ನೀಡುತ್ತೇನೆ. ನಾನು ಯಾವುದನ್ನು ಮುಚ್ಚಿಟ್ಟಿಲ್ಲ. ಈ ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ. ನಾನು ಕಾನೂನಿಗೆ ಗೌರವ ಕೊಡುತ್ತೇನೆ ಎಂದು ತಿಳಿಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ