ಮಹಿಳೆ ಸ್ನಾನ ಮಾಡುತ್ತಿರುವಾಗ ವಿಡಿಯೋ ಮಾಡಿ, ವಾಟ್ಸಾಪ್ ನಲ್ಲಿ ಶೇರ್ ಮಾಡಿದ ಮನೆ ಮಾಲಿಕ! - Mahanayaka
10:37 PM Wednesday 29 - October 2025

ಮಹಿಳೆ ಸ್ನಾನ ಮಾಡುತ್ತಿರುವಾಗ ವಿಡಿಯೋ ಮಾಡಿ, ವಾಟ್ಸಾಪ್ ನಲ್ಲಿ ಶೇರ್ ಮಾಡಿದ ಮನೆ ಮಾಲಿಕ!

mobile video
22/08/2023

ರಾಮನಗರ: ಮಹಿಳೆ ಸ್ನಾನ ಮಾಡುವ ವಿಡಿಯೋ ಮಾಡಿದ ಬಾಡಿಗೆ ಮನೆ ಮಾಲಿಕನೋರ್ವ ಅದನ್ನು ವಾಟ್ಸಾಪ್ ನಲ್ಲಿ ಶೇರ್ ಮಾಡಿ, ಮಹಿಳೆಯ ಮಾನಹಾನಿ ಮಾಡಿರುವ ಘಟನೆಯೊಂದು ರಾಮನಗರದಲ್ಲಿ ಬೆಳಕಿಗೆ ಬಂದಿದೆ.

ಧನರಾಜ್ ಎಂಬಾತ ಈ ದುಷ್ಕೃತ್ಯ ಎಸಗಿದ ಆರೋಪ ಎದುರಿಸುತ್ತಿರೋ ವ್ಯಕ್ತಿಯಾಗಿದ್ದಾನೆ.  ರಾಮನಗರ ಜಿಲ್ಲೆಯ ಕನಕಪುರ ನಗರದಲ್ಲಿ ಸಂತ್ರಸ್ತ ಮಹಿಳೆ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಮಹಿಳೆ ಸ್ನಾನ ಮಾಡುತ್ತಿದ್ದ ವೇಳೆ ಮನೆ ಮಾಲಿಕ ಮೊಬೈಲ್ ನಲ್ಲಿ ವಿಡಿಯೋ ಮಾಡಿಕೊಂಡು ವಾಟ್ಸಾಪ್ ಗ್ರೂಪ್ ಗಳಲ್ಲಿ ಶೇರ್ ಮಾಡಿದ್ದಾನೆ ಎನ್ನಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಶೇರ್ ಆಗಿರೋದನ್ನ ಕಂಡ ಮಹಿಳೆ ತೀವ್ರ ಆತಂಕಕ್ಕೊಳಗಾಗಿದ್ದು, ಧನರಾಜ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಇತ್ತೀಚಿನ ಸುದ್ದಿ