ಹೋಮ್ ವರ್ಕ್ ಮಾಡಲಿಲ್ಲ ಎಂದು ವಿದ್ಯಾರ್ಥಿಯನ್ನು ಹೊಡೆದು ಕೊಂದ ಶಿಕ್ಷಕ - Mahanayaka
6:28 PM Thursday 16 - October 2025

ಹೋಮ್ ವರ್ಕ್ ಮಾಡಲಿಲ್ಲ ಎಂದು ವಿದ್ಯಾರ್ಥಿಯನ್ನು ಹೊಡೆದು ಕೊಂದ ಶಿಕ್ಷಕ

home work
21/10/2021

ರಾಜಸ್ಥಾನ: ಹೋಮ್ ವರ್ಕ್(Home Work) ಮಾಡಲಿಲ್ಲ ಎನ್ನುವ ಕಾರಣಕ್ಕೆ ಶಿಕ್ಷಕನೋರ್ವ ವಿದ್ಯಾರ್ಥಿಯನ್ನು ಹೊಡೆದು ಹತ್ಯೆ ಮಾಡಿದ ಘಟನೆ ರಾಜಸ್ಥಾನದಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ.


Provided by

7ನೇ ತರಗತಿ ವಿದ್ಯಾರ್ಥಿ 13 ವರ್ಷ ವಯಸ್ಸಿನ ಗಣೇಶ್ ಹತ್ಯೆಗೀಡಾದ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿ ಹೋಮ್ ವರ್ಕ್ ಮಾಡದೇ ಶಾಲೆಗೆ ಬಂದಿದ್ದ ಎನ್ನಲಾಗಿದೆ. ಇದರಿಂದ ಕೋಪಗೊಂಡ ಶಿಕ್ಷಕ ವಿದ್ಯಾರ್ಥಿಗೆ ತೀವ್ರವಾಗಿ ಹಲ್ಲೆ ನಡೆಸಿದ ಪರಿಣಾಮ ಆತ ಮೂರ್ಛೆ ಹೋಗಿದ್ದಾನೆ. ತಕ್ಷಣವೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆತ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.

ಘಟನೆಗೆ ಸಂಬಂಧಿಸಿದಂತೆ ಆರೋಪಿ ಶಿಕ್ಷಕ 35 ವರ್ಷ ವಯಸ್ಸಿನ ಮನೋಜ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಘಟನೆ ನಡೆದ ಖಾಸಗಿ ಶಾಲೆಯ ಮಾನ್ಯತೆ ರದ್ದು ಮಾಡುವ ಬಗ್ಗೆ ಕ್ರಮಕೈಗೊಳ್ಳಲು ಕೂಡ ಅಧಿಕಾರಿಗಳು ಮುಂದಾಗಿದ್ದಾರೆ ಎನ್ನಲಾಗಿದೆ. ಈ ಘಟನೆಗೆ ಶಿಕ್ಷಣ ಸಚಿವ ಗೋವಿಂದ್ ಸಿಂಗ್ ಬೇಸರ ವ್ಯಕ್ತಪಡಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb

ಇನ್ನಷ್ಟು ಸುದ್ದಿಗಳು…

ಹಿಂದೂ ಧರ್ಮೀಯರ ಮೇಲಿನ ದಾಳಿ ವಿರುದ್ಧ ವಿಎಚ್ ಪಿ, ಬಜರಂಗದಳ ಪ್ರತಿಭಟನೆ

ಅಫ್ಘಾನಿಸ್ತಾನ: ವಾಲಿಬಾಲ್ ಆಟಗಾರ್ತಿಯ ಶಿರಚ್ಚೇದನ ನಡೆಸಿದ ತಾಲಿಬಾನಿಗಳು

ಸಾರ್ವಜನಿಕ ಸ್ಥಳಗಳಲ್ಲಿ ತಲ್ವಾರ್ ಪ್ರದರ್ಶಿಸಿದ ಸಂಘ ಪರಿವಾರದ ವಿರುದ್ಧ ಪ್ರಕರಣ ದಾಖಲಿಸಲು ಪಾಪ್ಯುಲರ್ ಫ್ರಂಟ್ ಆಗ್ರಹ

ನಿರ್ಲಜ್ಜ, ನೀಚ ರಾಜಕಾರಣಿಗಳ ಬದಲು ಹಿಂದೂ ಸಂಘಟನೆಗಳಿಗೆ ಬಲ ತುಂಬಿ: ಬಿಜೆಪಿ ವಿರುದ್ಧ ಮುತಾಲಿಕ್ ಪರೋಕ್ಷ  ಕಿಡಿ

70ನೇ ವಯಸ್ಸಿನಲ್ಲಿ ಮೊದಲ ಮಗುವಿಗೆ ಜನ್ಮ ನೀಡಿದ ವೃದ್ಧೆ

65 ಸಾವಿರ ರೂ.ಗಳ ಹಳೆಯ ನೋಟನ್ನು ಬದಲಿಸಿಕೊಡುವಂತೆ ಜಿಲ್ಲಾಧಿಕಾರಿ ಮೊರೆ ಹೋದ ದೃಷ್ಟಿಹೀನ ವಿಕಲಚೇತನ!

ಇತ್ತೀಚಿನ ಸುದ್ದಿ