ಹನಿಟ್ರ್ಯಾಪ್ ಗೆ ಬಲಿಯಾದರೆ ಬಂಡೆಮಠದ ಶ್ರೀ ಬಸವಲಿಂಗ ಸ್ವಾಮೀಜಿ? - Mahanayaka
10:24 PM Sunday 15 - December 2024

ಹನಿಟ್ರ್ಯಾಪ್ ಗೆ ಬಲಿಯಾದರೆ ಬಂಡೆಮಠದ ಶ್ರೀ ಬಸವಲಿಂಗ ಸ್ವಾಮೀಜಿ?

basavalinga swami
25/10/2022

ರಾಮನಗರ: ಬಂಡೆಮಠದ ಶ್ರೀ ಬಸವಲಿಂಗ ಸ್ವಾಮೀಜಿಯ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಡೆತ್ ನೋಟ್ ನಲ್ಲಿ ಬರೆದಿರುವ ಹಲವು ಸಂಗತಿಗಳು ಇದೀಗ ಸ್ವಾಮೀಜಿ ಹನಿಟ್ರ್ಯಾಪ್ ಗೆ ಬಲಿಯಾದರೆ ಎನ್ನುವ ಅನುಮಾನಗಳಿಗೆ ಕಾರಣವಾಗಿದೆ.

ಸ್ವಾಮೀಜಿ ಐದು ಪುಟದ ಡೆತ್ ನೋಟ್ ಬರೆದಿದ್ದಾರೆ, ಮೂರು ಪುಟ ಪೊಲೀಸರಿಗೂ ಸಿಕ್ಕಿದ್ದು, ತನಿಖೆ ನಡೆಯುತ್ತಿದೆ. ಡೆತ್‌ನೋಟ್‌ ಬಗ್ಗೆ ಸಾಕಷ್ಟು ಊಹಾಪೋಹಗಳು ಕೇಳಿಬರುತ್ತಿವೆ.

ಶ್ರೀ ಕಂಚುಗಲ್ ಬಂಡೇಮಠದ ಗುರು ಮಡಿವಾಳೇಶ್ವರ ಬಸವಲಿಂಗ ಸ್ವಾಮೀಜಿ (45) ರಾಮನಗರ ಜಿಲ್ಲೆ ಮಾಗಡಿ ತಾಲೂಕಿನಲ್ಲಿರುವ ಬಂಡೇಮಠದಲ್ಲಿ ನೇಣಿಗೆ ಶರಣಾಗಿದ್ದರು. ಇದೀಗ ಸ್ವಾಮೀಜಿಯವರು ಡೆತ್ ನೋಟು ಬರೆದಿಟ್ಟಿರುವುದು, ಮರ್ಯಾದೆಗೆ ಅಂಜಿ ಆತ್ಮಹತ್ಯೆ ಎಂದು ಉಲ್ಲೇಖಿಸಿರುವುದು ಪ್ರಕರಣಕ್ಕೆ ಮತ್ತಷ್ಟು ಟ್ವಿಸ್ಟ್ ಸಿಕ್ಕಿದೆ.

ಕೆಲವು ವರದಿಗಳ ಪ್ರಕಾರ ಡೆತ್ ನೋಟ್ ನಲ್ಲಿ ಕೆಲವರ ಹೆಸರನ್ನು ಬರೆಯಲಾಗಿದೆ ಎಂದು ಹೇಳಲಾಗಿದೆ. ಜೊತೆಗೆ ಯುವತಿಯೋರ್ವಳ ಬಗ್ಗೆ  ಡೆತ್ ನೋಟ್ ನಲ್ಲಿ ಉಲ್ಲೇಖಿಸಲಾಗಿದ್ದು, ಕುಂಚಗಲ್​​​​ ಸ್ವಾಮೀಜಿ ಕೆಳಗಿಳಿಸಲು ಮಾಸ್ಟರ್ ಪ್ಲಾನ್ ಮಾಡಲಾಗಿತ್ತು. ಮತ್ತೊಂದು ಮಠದ ಸ್ವಾಮೀಜಿ ತಂತ್ರಕ್ಕೆ ಬಲಿಯಾದೇ ಎಂದು ಸ್ವಾಮೀಜಿ ಬರೆದಿದ್ದಾರೆ ಎಂದು ವರದಿಯಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ