ಓವರ್ ಟೇಕ್ ಭರದಲ್ಲಿ ಬೈಕ್ ಗಳ ನಡುವೆ ಭೀಕರ ಅಪಘಾತ: ಓರ್ವ ಸಾವು; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ - Mahanayaka
12:17 PM Thursday 11 - September 2025

ಓವರ್ ಟೇಕ್ ಭರದಲ್ಲಿ ಬೈಕ್ ಗಳ ನಡುವೆ ಭೀಕರ ಅಪಘಾತ: ಓರ್ವ ಸಾವು; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

huballi
06/04/2024

ಹುಬ್ಬಳ್ಳಿ: ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಎರಡು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ನಡೆದ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬೆಲವಂತರ ಗ್ರಾಮದ ಬಳಿ ನಡೆದಿದ್ದು, ಓರ್ವ ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿದ್ದಾನೆ.


Provided by

ತುಕಾರಾಂ ಕಮ್ಮಾರ (26) ಅಪಘಾತದಲ್ಲಿ ಸಾವನ್ನಪ್ಪಿದ ಬೈಕ್ ಸವಾರನಾಗಿದ್ದು, ಲಾರಿಯನ್ನು ಓವರ್ ಟೇಕ್ ಮಾಡಲು ಒಂದು ಬೈಕ್ ಸವಾರ ಮುಂದಾಗಿದ್ದು, ಈ ವೇಳೆ ಮುಂಭಾಗದಿಂದ ಬಂದ ಇನ್ನೊಂದು ಬೈಕ್ ಗೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಬೈಕ್ ಸವಾರ ತುಕಾರಾಂ ಕಮ್ಮಾರ ಸ್ಥಳದಲ್ಲೇ ಮೃತಪಟ್ಟರೆ ಮತ್ತೋರ್ವ ಬೈಕ್ ಸವಾರ ಮಲ್ಲೇಶ್ ಹರಿಜನ್ ಅವರಿಗೆ ಗಂಭೀರವಾಗಿ ಗಾಯಗಳಾಗಿವೆ.

ಘಟನೆಯ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಬೆಚ್ಚಿಬೀಳಿಸುವಂತಿದೆ. ಘಟನೆ ಸಂಬಂಧ ಕಲಘಟಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿhttps://chat.whatsapp.com/Jpfswu2K6fn62HOHSl5eth

 

ಇತ್ತೀಚಿನ ಸುದ್ದಿ