ಲಾರಿ—ಸ್ಕೂಟರ್  ನಡುವೆ ಭೀಕರ ಅಪಘಾತ - Mahanayaka

ಲಾರಿ—ಸ್ಕೂಟರ್  ನಡುವೆ ಭೀಕರ ಅಪಘಾತ

lorry
27/06/2023

ಲಾರಿ ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಂದು ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಪುಂಚಮೆ ಎಂಬಲ್ಲಿ ನಡೆದಿದೆ.

ಬಾಲಕೃಷ್ಣ ಶೆಟ್ಟಿ, ಗಾಯಗೊಂಡವರು. ಪೊಳಲಿ ಪುಂಚಮೆಯಿಂದ ಅಡ್ಡೂರು ದಾರಿ ಮಧ್ಯೆ ಎದುರಿನಿಂದ ಬರುತ್ತಿದ್ದ ಕೆಂಪು ಕಲ್ಲಿನ ಲಾರಿ ಸ್ಕೂಟರ್ ಗೆ ಡಿಕ್ಕಿಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಲಾರಿ ರಸ್ತೆ ಮಧ್ಯೆ ಪಲ್ಡಿಯಾಗಿದೆ. ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದ್ದು, ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ