ಲಾರಿ– ಟಿಟಿ ವಾಹನ ವಾಹನ ನಡುವೆ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

17/02/2024
ರಾಮನಗರ: ಬೈರಾಪಟ್ಟಣದ ಚಾಮುಂಡೇಶ್ವರಿ ಮೆಡಿಕಲ್ ಕಾಲೇಜು ಬಳಿ ಲಾರಿ ಹಾಗೂ ಟಿಟಿ ವಾಹನ ನಡುವೆ ಅಪಘಾತ ಸಂಭವಿಸಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ ಆರು ಜನರು ಗಾಯಗೊಂಡಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ.ತ್ರೀವ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಅಪಾಘತದಲ್ಲಿ ಮೃತಪಟ್ಟವರನ್ನು ಸೋಮಲಿಂಗಪ್ಪ (70), ಶಿವಲಿಂಗಪ್ಪ (66), ರಾಜೇಶ್ವರಿ ಎಂದು ಗುರುತಿಸಲಾಗಿದೆ.
ಬೆಂಗಳೂರಿನಿಂದ ಮೈಸೂರಿಗೆ ಟಿಟಿ ವಾಹನ ಹೊರಟಿದ್ದು, ಟಿಟಿ ವಾಹನಕ್ಕೆ ಹಿಂಬದಿಯಿಂದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ.
ಅಪಘಾತದ ತೀವ್ರತೆಗೆ ಟಿಟಿ ವಾಹನ ಸಂಪೂರ್ಣ ಜಖಂಗೊಂಡಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.