ಭೀಕರ ಅಪಘಾತ: ಬಸ್ ಮಗುಚಿ ಬಿದ್ದು, 18ಕ್ಕೂ ಹೆಚ್ಚು ಜನರಿಗೆ ಗಾಯ

kundapura bus
18/10/2023

ಕುಂದಾಪುರ:ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದು 18 ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ಅರಾಟೆ ಮುಳ್ಳಿಕಟ್ಟೆ ನಡುವೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಜೆ ನಡೆದಿದೆ.

ಕುಂದಾಪುರದಿಂದ ಬೈಂದೂರು ಕಡೆ ಹೊರಟ ಲೋಕಲ್‍ ಬಸ್ಸು ಅರಾಟೆ ಸೇತುವೆ ದಾಟಿದ ಬಳಿಕ ಚಾಲಕನ ಅತಿವೇಗ ಹಾಗೂ ನಿರ್ಲಕ್ಷದಿಂದಾಗಿ ನಿಯಂತ್ರಣ ತಪ್ಪಿದ್ದು, ಡಿವೈಡರ್ ಏರಿ ಪಕ್ಕದ ರಸ್ತೆಗೆ ಪಲ್ಟಿಯಾಗಿದೆ.

ಇದೇ ವೇಳೆ ಎದುರಿಗೆ ಬರುತ್ತಿದ್ದ ಕಾರಿಗೂ ಡಿಕ್ಕಿ ಹೊಡೆದಿದೆ. ಅಘಘಾತದ ರಭಸಕ್ಕೆ ಬಸ್ಸಿನಲ್ಲಿದ್ದ 18ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯಗಳಾಗಿದೆ. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

Exit mobile version