ರಂಜಾನ್ ಬಟ್ಟೆ ವ್ಯಾಪಾರ ಮುಗಿಸಿ ಬರುತ್ತಿದ್ದ ವೇಳೆ ಭೀಕರ ಅಪಘಾತ: ಇಬ್ಬರು ವ್ಯಾಪಾರಿಗಳ ದುರ್ಮರಣ - Mahanayaka
10:40 AM Saturday 7 - February 2026

ರಂಜಾನ್ ಬಟ್ಟೆ ವ್ಯಾಪಾರ ಮುಗಿಸಿ ಬರುತ್ತಿದ್ದ ವೇಳೆ ಭೀಕರ ಅಪಘಾತ: ಇಬ್ಬರು ವ್ಯಾಪಾರಿಗಳ ದುರ್ಮರಣ

kalaburgi
17/03/2024

ಕಲಬುರಗಿ: ರಂಜಾನ್  ಪ್ರಯುಕ್ತ ಬಟ್ಟೆ ವ್ಯಾಪಾರ ಮುಗಿಸಿಕೊಂಡು ಬರುತ್ತಿದ್ದ ವೇಳೆ ಇಬ್ಬರು ಭೀಕರ ರಸ್ತೆ ಅಪಘಾತಕ್ಕೆ ಬಲಿಯಾದ ಘಟನೆ  ಶಹಬಾದ್ ತಾಲೂಕಿನ ಭಂಕೂರ ಗ್ರಾಮದ ಬಳಿ ನಡೆದಿದೆ.

ಉತ್ತರ ಪ್ರದೇಶ ಮೂಲದ ಜಾಹೀದ್ ಪಠಾಣ್(30), ಶಾಕೀರ್(20) ಮೃತಪಟ್ಟವರು ಎಂದು ಗುರುತಿಸಲಾಗಿದೆ. ರಂಜಾನ್ ಹಿನ್ನೆಲೆ ಬಟ್ಟೆ ವ್ಯಾಪಾರ ಮುಗಿಸಿಕೊಂಡು ವಾಪಸ್ ಆಗುತ್ತಿದ್ದ ವೇಳೆ ಸ್ವಿಫ್ಟ್ ಕಾರು ಹಾಗೂ ಸ್ಕಾರ್ಫಿಯೋ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಸ್ವಿಫ್ಟ್ ಕಾರಿನಲ್ಲಿ ಉತ್ತರ ಪ್ರದೇಶ ಮೂಲದ ಮೂವರು ಬಟ್ಟೆ ವ್ಯಾಪಾರಿಗಳು ಪ್ರಯಾಣಿಸುತ್ತಿದ್ದರು. ಘಟನೆಯ ವೇಳೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಶಹಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ