ಲಾರಿ—ಕಾರಿನ ನಡುವೆ ಭೀಕರ ಅಪಘಾತ: ಇಬ್ಬರು ಸಾವು, ಇನ್ನಿಬ್ಬರ ಸ್ಥಿತಿ ಗಂಭೀರ

25/07/2025
ಮಡಿಕೇರಿ: ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ನಡೆದು ಇಬ್ಬರು ಸಾವನ್ನಪ್ಪಿದ ಘಟನೆ ಮಡಿಕೇರಿ ತಾಲೂಕಿನ ದೇವರಕೊಲ್ಲಿ ಬಳಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಈ ಅಪಘಾತ ನಡೆದಿದೆ. ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರ ಸ್ಥಿತಿ ಚಿಂತಾಜನಕವಾಗಿದೆ.
ಗಾಯಾಳುಗಳನ್ನು ದಕ್ಷಿಣ ಕನ್ನಡದ ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದೆ. ಮಡಿಕೇರಿ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: