ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಭೀಕರ ಅಪಘಾತ: ಓರ್ವ ಸಾವು

22/08/2023
ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಭೀಕರ ಅಪಘಾತ ನಡೆದಿದ್ದು, ಓರ್ವ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿವೆ.
ರಾತ್ರಿ ಸುಮಾರು 11:30ರ ವೇಳೆಗೆ ಈ ಅಪಘಾತ ನಡೆದಿದೆ. ಕೆಟ್ಟು ನಿಂತಿದ್ದ ಬೊಲೆರೋ ಪಿಕಪ್ ವಾಹನವನ್ನು ಟೋಯಿಂಗ್ ವಾಹನದಲ್ಲಿ ಟೋ ಮಾಡಿಕೊಂಡು ಹೋಗಲಾಗುತ್ತಿತ್ತು, ಈ ವೇಳೆ ಹಿಂದಿನಿಂದ ಬಂದ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಬುಲೆರೋ ಪಿಕಪ್ ನಲ್ಲಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
ಮೃತಪಟ್ಟ ಬೊಲೆರೋ ಚಾಲಕನನ್ನು ಹರೀಶ್ ಎಂದು ಗುರುತಿಸಲಾಗಿದೆ. ಕ್ಯಾಂಟರ್ ಚಾಲಕ ಮನ್ಸೂರ್ ಗೆ ಗಾಯಗಳಾಗಿದ್ದು, ಕ್ಯಾಂಟರ್ ನಲ್ಲೇ ಚಾಲಕ ಸಿಲುಕಿ ಕೊಂಡಿದ್ದ. ಬಳಿಕ ಕ್ರೈನ್ ಸಹಾಯದಿಂದ ಮನ್ಸೂರ್ ನನ್ನು ಹೊರ ತೆಗೆಯಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.