ಪಣಂಬೂರಿನಲ್ಲಿ ಭೀಕರ ಸರಣಿ ಅಪಘಾತ: ಮೂವರು ಸಾವು, ಟ್ಯಾಂಕರ್ ಗಳ ನಡುವೆ ಸಿಲುಕಿದ ಆಟೋ
ಸುರತ್ಕಲ್: ಮಂಗಳೂರಿನ ಪಣಂಬೂರು ಸಿಗ್ನಲ್ ಬಳಿ ನಡೆದ ಭೀಕರ ಸರಣಿ ಅಪಘಾತದಲ್ಲಿ ಮೂವರು ಮೃತಪಟ್ಟ ದಾರುಣ ಘಟನೆ ನಡೆದಿದೆ.
ಸಿಗ್ನಲ್ ಬಳಿ ಸರತಿ ಸಾಲಿನಲ್ಲಿ ನಿಂತಿದ್ದ ವೇಳೆ ಎರಡು ಟ್ಯಾಂಕರ್, ಆಟೋ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದೆ. ಕಾರು ಹಾಗೂ ಆಟೋದ ಹಿಂದಿದ್ದ ಟ್ಯಾಂಕರ್ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಆಟೋ ರಿಕ್ಷಾ ಎದುರು ನಿಂತಿದ್ದ ಕಾರಿಗೆ ಅಪ್ಪಳಿಸಿ, ಮತ್ತೊಂದು ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ. ಎರಡು ಟ್ಯಾಂಕರ್ ಗಳ ಮಧ್ಯೆ ಸಿಲುಕಿದ ಆಟೋ ಅಪ್ಪಚ್ಚಿಯಾದ ಪರಿಣಾಮ ಈ ಭೀಕರ ಅಪಘಾತ ಸಂಭವಿಸಿದೆ.
ಆಟೋದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ಹಾಗೂ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD























