ಹೊಸ ವರ್ಷದ ಸಂಭ್ರಮದ ನಡುವೆಯೇ ಸಮುದ್ರಕ್ಕಿಳಿದ ಯುವಕ ನೀರುಪಾಲು! - Mahanayaka

ಹೊಸ ವರ್ಷದ ಸಂಭ್ರಮದ ನಡುವೆಯೇ ಸಮುದ್ರಕ್ಕಿಳಿದ ಯುವಕ ನೀರುಪಾಲು!

mangaluru beech
31/12/2022

ಹೊಸ ವರ್ಷದ ಸಂಭ್ರಮದ ನಡುವೆಯೇ ಮಂಗಳೂರು ನಗರದ ಎನ್ ಐಟಿಕೆ ಲೈಟ್‌ ಹೌಸ್‌ ಬೀಚ್ ‌ನಲ್ಲಿ ಸಮುದ್ರಕ್ಕೆ ಇಳಿದಿದ್ದ ಇಬ್ಬರು ಸ್ನೇಹಿತರ ಪೈಕಿ ಓರ್ವ ನಾಪತ್ತೆಯಾಗಿರುವ ಕುರಿತು ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಪತ್ತೆಯಾದ ಯುವಕನನ್ನು ಸತ್ಯಂ (18) ಎಂದು ಗುರುತಿಸಲಾಗಿದೆ. ಇವರು ಕೆಪಿಟಿ ತಾಂತ್ರಿಕ ಕಾಲೇಜಿನಲ್ಲಿ ಡಿಪ್ಲೋಮ ಅಂತಿಮ ವರ್ಷದ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.

ಸತ್ಯಂ ಮತ್ತು ಅವರ ಸ್ನೇಹಿತ ಎಂಆರ್‌ ಪಿಎಲ್ ಕ್ವಾಟ್ರಸ್ ನಲ್ಲಿ ವಾಸವಾಗಿದ್ದ ಪ್ರಭಾಕರನ್ (19) ಎಂಬುವವರು ಜೊತೆಯಾಗಿ ಲೈಟ್‌ ಹೌಸ್‌ ಬೀಚ್‌ ಗೆ ಬಂದಿದ್ದರು. ಈ ವೇಳೆ ಸ್ನೇಹಿತರಿಬ್ಬರೂ ಸಮುದ್ರಕ್ಕೆ  ಇಳಿದಿದ್ದು, ಸತ್ಯಂ ನೀರಿನ ಸೆಳೆತಕ್ಕೆ ಸಿಲುಕಿ ನೀರುಪಾಲಾಗಿದ್ದಾರೆ ಎನ್ನಲಾಗಿದೆ.

ಸದ್ಯ ಸ್ಥಳೀಯ ಮೀನುಗಾರರು ಸತ್ಯಂ ಅವರ ಹುಡುಕಾಟದಲ್ಲಿ ತೊಡಗಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಸುರತ್ಕಲ್‌ ಪೊಲೀಸರು ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ