ಆಸ್ಪತ್ರೆ ಆವರಣದಲ್ಲಿ ಪತ್ತೆಯಾಯ್ತು 11 ತಲೆ ಬುರುಡೆ, ಬ್ರೂಣಗಳ ಎಲುಬು!
ಮಹಾರಾಷ್ಟ್ರ: ಆಸ್ಪತ್ರೆಯ ಆವರಣದಲ್ಲಿ ತಲೆ ಬುರುಡೆ ಹಾಗೂ ಭ್ರೂಣಗಳ ಎಲುಬು ಪತ್ತೆಯಾಗಿರುವ ಘಟನೆಯೊಂದು ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯಲ್ಲಿನ ಕದಂ ಎಂಬ ಆಸ್ಪತ್ರೆಯ ಆವರಣದಲ್ಲಿ ನಡೆದಿದೆ.
ಬ್ರೂಣ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಈ ಮಹತ್ವದ ಸಾಕ್ಷಿಯೊಂದು ದೊರಕಿದ್ದು, ಆಸ್ಪತ್ರೆ ಆವರಣದಲ್ಲಿ ಭ್ರೂಣಗಳ 54 ಎಲುಬುಗಳು ಹಾಗೂ 11 ತಲೆ ಬುರುಡೆಗಳು ಹೂತಿಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.
17 ವರ್ಷದ ಅಪ್ರಾಪ್ತ ಬಾಲಕನೊಬ್ಬ 13 ವರ್ಷದ ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿದ್ದ. ಬಾಲಕಿ 5 ತಿಂಗಳ ಗರ್ಭಿಣಿಯಾಗಿದ್ದಳು. ಹೀಗಾಗಿ ಬಾಲಕನ ಕುಟುಂಬಸ್ಥರು ಕೊಲೆಯ ಬೆದರಿಗೆ ಒಡ್ಡಿ ಬಾಲಕಿಗೆ ಗರ್ಭಪಾತ ಮಾಡಿಸಿದ್ದರು. ಈ ಸಂಬಂಧ ಬಾಲಕಿಯ ತಾಯಿ ದೂರು ದಾಖಲಿಸಿದ್ದರು. ಈ ಪ್ರಕರಣದ ತನಿಖೆ ನಡೆಸಿದ ವೇಳೆ ಆಸ್ಪತ್ರೆಯಲ್ಲಿ ಭಾರೀ ಪ್ರಮಾಣದ ಬ್ರೂಣ ಹತ್ಯೆ ನಡೆಯುತ್ತಿದೆ ಎನ್ನುವುದು ಬಯಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಈ ರಸ್ತೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ತಿಳಿದರೆ ಶಾಕ್ ಆಗುತ್ತೀರಿ!
ಯುಪಿ ಚುನಾವಣೆ: ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ; ಗೋರಖ್ ಪುರದಿಂದ ಯೋಗಿ ಆದಿತ್ಯನಾಥ್ ಸ್ಪರ್ಧೆ
ಬಾಲಿವುಡ್ ನಟ ಸಲ್ಮಾನ್ ಖಾನ್ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಅರ್ಜಿ ವಜಾ
ಜಲ್ಲಿಕಟ್ಟು ಸ್ಪರ್ಧೆ: ಓರ್ವ ಸಾವು, 80 ಮಂದಿಗೆ ಗಾಯ
ಕ್ರೀಡಾಳುಗಳಿಗೆ ಪಠ್ಯಕ್ರಮದಂತೆ ಸೂಕ್ತ ಮಾರ್ಗದರ್ಶನ ನೀಡಬೇಕಿದೆ: ಮುಖ್ಯಮಂತ್ರಿ ಬೊಮ್ಮಾಯಿ