ಬೆಡ್ ಇಲ್ಲ ಎಂದ ಆಸ್ಪತ್ರೆ ಸಿಬ್ಬಂದಿ: ಆ್ಯಂಬುಲೆನ್ಸ್ ನಲ್ಲೇ ಅತ್ಯಾಚಾರ ಸಂತ್ರಸ್ಥೆ ಬಾಲಕಿ ಸಾವು - Mahanayaka

ಬೆಡ್ ಇಲ್ಲ ಎಂದ ಆಸ್ಪತ್ರೆ ಸಿಬ್ಬಂದಿ: ಆ್ಯಂಬುಲೆನ್ಸ್ ನಲ್ಲೇ ಅತ್ಯಾಚಾರ ಸಂತ್ರಸ್ಥೆ ಬಾಲಕಿ ಸಾವು

stop rape
02/06/2025

ಪಾಟ್ನಾ: ಆಸ್ಪತ್ರೆಯಲ್ಲಿ ಹಾಸಿಗೆ ಸಿಗದ ಕಾರಣ ಗಂಟೆಗಟ್ಟಲೆ ಆಂಬ್ಯುಲೆನ್ಸ್​ ನಲ್ಲಿ ಕಾದ ಅತ್ಯಾಚಾರ ಸಂತ್ರಸ್ತ ಬಾಲಕಿ ಆ್ಯಂಬುಲೆನ್ಸ್ ನಲ್ಲೇ ಕೊನೆಯುಸಿರೆಳೆದ ಘಟನೆ ಬಿಹಾರದ ಪಾಟ್ನಾ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆದಿದೆ.

ರೋಹಿತ್ ಕುಮಾರ್ ಸಾಹ್ನಿ ಎಂಬಾತ ಸಂತ್ರಸ್ತ   ಬಾಲಕಿಗೆ ಚಾಕೊಲೇಟ್​ ಕೊಡಿಸುವುದಾಗಿ ಆಮಿಷವೊಡ್ಡಿ ಹೊರಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಬಳಿಕ ಚಾಕುವಿನಿಂದ ಕುತ್ತಿಗೆಗೆ ಇರಿದಿದ್ದ ಇದರಿಂದಾಗಿ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಳು. ಬಾಲಕಿ ಮಾತನಾಡುವ ಸ್ಥಿತಿಯಲ್ಲಿ ಇಲ್ಲವಾದರೂ ತನ್ನ ಮೇಲೆ ದೌರ್ಜನ್ಯ ನಡೆಸಿರುವುದನ್ನು ಸನ್ನೆ ಮೂಲಕವೇ ತಿಳಿಸಿದ್ದಳು. ಇದಾದ ಬಳಿಕ ಆರೋಪಿಯನ್ನು ರಾತ್ರಿಯೇ ಬಂಧಿಸಲಾಗಿತ್ತು.

ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ಚಿಕಿತ್ಸೆ ಕೊಡಿಸಲು ಆಸ್ಪತ್ರೆಗೆ ಕರೆತಂದಾಗ ತುರ್ತು ವಿಭಾಗದ ಸಿಬ್ಬಂದಿ ಬೆಡ್ ಇಲ್ಲ ಎಂದು ಹೇಳಿದರು. ಅಲ್ಲದೇ ಹಲವಾರು ವಾರ್ಡ್ ಗಳಿಗೆ ಅಲೆದಾಡುವಂತೆ ಮಾಡಿದ್ದರು. ಕೆಲವು ರಾಜಕಾರಣಿಗಳ ಮಧ್ಯಸ್ಥಿಕೆ ಬಳಿಕ ಸಂಜೆ 5 ಗಂಟೆ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಷ್ಟರಲ್ಲೇ ಬಾಲಕಿ ಕೊನೆಯುಸಿರೆಳೆದಿದ್ದಾಳೆ.

ಘಟನೆಯನ್ನು ಖಂಡಿಸಿ ಬಿಹಾರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ರಾಮ್ ನೇತೃತ್ವದಲ್ಲಿ ಆಸ್ಪತ್ರೆ ಎದುರು ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದು, ಆಸ್ಪತ್ರೆಯ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

<

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ