12:34 AM Saturday 23 - August 2025

ಗಾಝಾ ಆಸ್ಪತ್ರೆ ಮೇಲೆ ಇಸ್ರೇಲ್ ದಾಳಿ: ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆ ಮತ್ತು ರೆಡ್‌ಕ್ರಾಸ್ ಸಂಸ್ಥೆ

18/11/2023

ಗಾಝಾದ ಅತಿದೊಡ್ಡ ಆಸ್ಪತ್ರೆ ಮೇಲೆ ಇಸ್ರೇಲ್ ಪಡೆಗಳು ದಾಳಿ ಮಾಡಿದ ನಂತರ ತೀವ್ರ ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆ ಮತ್ತು ರೆಡ್‌ಕ್ರಾಸ್ ಸಂಸ್ಥೆ, ಸಾವಿರಾರು ರೋಗಿಗಳು ಮತ್ತು ನಾಗರಿಕರನ್ನು ರಕ್ಷಿಸಬೇಕು ಎಂದು ಒತ್ತಾಯಿಸಿವೆ.

ಇಸ್ರೇಲಿ ಪಡೆಗಳು ಅಲ್-ಶಿಫಾ ಆಸ್ಪತ್ರೆ ಮೇಲೆ ದಾಳಿ ನಡೆಸಿದೆ. ಈ ಆಸ್ತ್ರೆಯ ಕೆಳಗೆ ಸುರಂಗಗಳಲ್ಲಿ ಹಮಾಸ್ ಕಮಾಂಡ್ ಸೆಂಟರ್ ಇದೆ ಎಂದು ನಂಬಿರುವ ಇಸ್ರೇಲ್ ಪಡೆಗಳು ಆಸ್ಪತ್ರೆಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿವೆ.

“ಗಾಝಾದ ಅಲ್-ಶಿಫಾ ಆಸ್ಪತ್ರೆ ಮೇಲಿನ ಮಿಲಿಟರಿ ದಾಳಿಯ ವರದಿಗಳಿಂದ ನಾನು ದಿಗ್ಭ್ರಮೆಗೊಂಡಿದ್ದೇನೆ” ಎಂದು ವಿಶ್ವಸಂಸ್ಥೆಯ ಮಾನವೀಯ ಮುಖ್ಯಸ್ಥ ಮಾರ್ಟಿನ್ ಗ್ರಿಫಿತ್ಸ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

“ನವಜಾತ ಶಿಶುಗಳು, ರೋಗಿಗಳು, ವೈದ್ಯಕೀಯ ಸಿಬ್ಬಂದಿ ಮತ್ತು ಎಲ್ಲಾ ನಾಗರಿಕರನ್ನು ರಕ್ಷಿಸಬೇಕು. ಆಸ್ಪತ್ರೆಗಳು ಯುದ್ಧಭೂಮಿಯಲ್ಲ” ಎಂದು ಎಚ್ಚರಿಸಿದ್ದಾರೆ.
ಸ್ವಿಸ್ ನಗರದಲ್ಲಿ ಗ್ರಿಫಿತ್ಸ್ ಅವರೊಂದಿಗೆ ಇರಾನ್ ವಿದೇಶಾಂಗ ಸಚಿವ ಹುಸೇನ್ ಅಮೀರ್-ಅಬ್ದೊಲ್ಲಾಹಿಯಾನ್ ಅವರೊಂದಿಗೆ ನಡೆಸಿದ ಸಭೆಗೆ ಅವರ ಹೇಳಿಕೆಯನ್ನು ಲಿಂಕ್ ಮಾಡಿದ ಇಸ್ರೇಲ್, “ನೀವು ಇರಾನ್ ವಿದೇಶಾಂಗ ಸಚಿವರನ್ನು ಭೇಟಿ ಮಾಡುವ ಮೊದಲು ಅಥವಾ ನಂತರ ಇದನ್ನು ಟ್ವೀಟ್ ಮಾಡಿದ್ದೀರಾ? ಅಡಗಿಕೊಳ್ಳಲು ಆಸ್ಪತ್ರೆಗಳನ್ನು ಬಳಸಿಕೊಂಡು ಭಯೋತ್ಪಾದಕ ಸಂಘಟನೆಗೆ ಹಣ ಮತ್ತು ಶಸ್ತ್ರಾಸ್ತ್ರ ನೀಡುವುದನ್ನು ನಿಲ್ಲಿಸುವಂತೆ ನೀವು ಅವರಿಗೆ ಹೇಳುವುದಿಲ್ಲ?” ಎಂದು ಪ್ರಶ್ನಿಸಿದೆ.

ಇತ್ತೀಚಿನ ಸುದ್ದಿ

Exit mobile version