ಉಡುಪಿ: ಅಡುಗೆ ಅನಿಲ ಸೋರಿಕೆಯಾಗಿ ಹೊಟೇಲ್ ಗೆ ಬೆಂಕಿ - Mahanayaka
12:52 AM Saturday 14 - December 2024

ಉಡುಪಿ: ಅಡುಗೆ ಅನಿಲ ಸೋರಿಕೆಯಾಗಿ ಹೊಟೇಲ್ ಗೆ ಬೆಂಕಿ

top and town
27/11/2022

ಉಡುಪಿ: ಸಿಟಿ ಬಸ್ ನಿಲ್ದಾಣದ ಹೋಟೆಲ್ ವೊಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿದ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ.

ನಗರದ ಮಧ್ಯಭಾಗದಲ್ಲಿರುವ ಟಾಪ್ ಇನ್ ಟೌನ್ ಹೋಟೆಲ್ ನ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹತ್ತಿಕೊಂಡಿತ್ತು, ಹೊಟೇಲ್ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನ ಪಟ್ಟಿದ್ದರು. ಆದರೆ ಅದು ಹತೋಟಿಗೆ ಬಾರದ ಕಾರಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದರು.

ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು, ಆ ಮೂಲಕ ಭಾರೀ ದುರಂತವೊಂದು ತಪ್ಪಿದಂತಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ