ಕಾಲುಸಂಕದಿಂದ  ತೋಡಿಗೆ ಬಿದ್ದು ಹೋಟೆಲ್ ನೌಕರ ಮೃತ್ಯು - Mahanayaka

ಕಾಲುಸಂಕದಿಂದ  ತೋಡಿಗೆ ಬಿದ್ದು ಹೋಟೆಲ್ ನೌಕರ ಮೃತ್ಯು

udupi news
29/06/2023


Provided by

ಉಡುಪಿ: ಕಾಲುಸಂಕದಿಂದ ಆಕಸ್ಮಿಕವಾಗಿ‌ ತೋಡಿಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಉಡುಪಿ ಮಠದಬೆಟ್ಟು ಎಂಬಲ್ಲಿ ನಡೆದಿದೆ.

ಮೃತರನ್ನು ಬೈಂದೂರು ಬಿಜೂರು ನಿವಾಸಿ ಸತೀಶ್(33) ಎಂದು ಗುರುತಿಸಲಾಗಿದೆ.

ಇವರುಉಡುಪಿಯ ಪ್ರತಿಷ್ಠಿತ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದು, ನಿನ್ನೆ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದರು. ಇಂದು ಮಧ್ಯಾಹ್ನದ ಸುಮಾರಿಗೆ ಮಠದಬೆಟ್ಟು ತೋಡಿನಲ್ಲಿ ಸತೀಶ್ ಮೃತದೇಹ ಪತ್ತೆಯಾಗಿದೆ. ಸತೀಶ್ ಎರಡು ವರ್ಷಗಳ ಹಿಂದೆ ಮದುವೆಯಾಗಿದ್ದು, ಒಂದು ಮಗು ಇದೆ ಎಂದು ತಿಳಿಬಂದಿದೆ.

ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು ಮೃತದೇಹವನ್ನು ಮೇಲೆತ್ತಿದರು. ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲು ನೆರವಾದರು.

ಘಟನಾ ಸ್ಥಳಕ್ಕೆ ಎಸ್ಪಿ ಅಕ್ಷಯ್ ಮಚ್ಚೀಂದ್ರ, ಎಎಸ್ಪಿ ಸಿದ್ದಲಿಂಗಪ್ಪ ಭೇಟಿ ಪರಿಶೀಲನೆ ನಡೆಸಿದರು. ಉಡುಪಿ ನಗರ ಠಾಣೆ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ