7 ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಸಂಸದ ಹೊಟೇಲ್ ನಲ್ಲಿ ಆತ್ಮಹತ್ಯೆ! - Mahanayaka
8:34 AM Wednesday 22 - October 2025

7 ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಸಂಸದ ಹೊಟೇಲ್ ನಲ್ಲಿ ಆತ್ಮಹತ್ಯೆ!

23/02/2021

ಮುಂಬೈ: ಇಲ್ಲಿನ ಮರೀನ್ ಡ್ರೈವ್ ನ ಹೊಟೇಲ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಸಂಸದರೋರ್ವರ ಮೃತದೇಹ ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯ ಪ್ರಕಾರ ಇದು ಆತ್ಮಹತ್ಯೆ ಎಂದು ಹೇಳಲಾಗಿದೆ.

ದಾದ್ರಾ ಮತ್ತು ನಗರ ಹವೇಲಿಯ ಪಕ್ಷೇತರ ಸಂಸದ ಮೋಹನ ದೇಲ್ಕರ್(58) ಆತ್ಮಹತ್ಯೆ ಮಾಡಿಕೊಂಡವರು. ಘಟನಾ ಸ್ಥಳದಲ್ಲಿ ಡೆತ್ ನೋಟ್ ಕೂಡ ಪತ್ತೆಯಾಗಿದೆ. ಹೊಟೇಲ್ ರೂಮ್ ನಲ್ಲಿ ನೇಣು ಬಿಗಿದುಕೊಂಡು ಇವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

7ನೇ ಬಾರಿಗೆ ಸಂಸದರಾಗಿದ್ದ ದೇಲ್ಕರ್  ಸದ್ಯ ಪಕ್ಷೇತರ ಸಂಸದರಾಗಿದ್ದಾರೆ. ಈ ಹಿಂದೆ ಅವರು ಕಾಂಗ್ರೆಸ್ ನಲ್ಲಿದ್ದರು. 2019ರಲ್ಲಿ ದಾದ್ರಾ ಮತ್ತು ನಗರ ಹವೇಲಿ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಅವರು,  ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ತೊರೆದು ಪಕ್ಷೇತರರಾಗಿ ಕಣಕ್ಕಿಳಿದು ಜಯಗಳಿಸಿದ್ದರು.

ಸದ್ಯ ಮೃತರ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಈ ಪರೀಕ್ಷೆಯ ವರದಿ ಬಂದ ಬಳಿಕವಷ್ಟೇ ಇವರ ಸಾವಿಗೆ ನಿಜವಾದ ಕಾರಣ ಏನು ಎಂದು ಸ್ಪಷ್ಟವಾಗಿ ಹೇಳಲು ಸಾಧ್ಯ. ಘಟನಾ ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಈ ಸಂಬಂಧ ಆತ್ಮಹತ್ಯೆ ಮಾಡಿಕೊಂಡ ಹೊಟೇಲ್ ಸಿಬ್ಬಂದಿಯಿಂದ ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿ