ಚಿಕ್ಕಮಗಳೂರಿನಲ್ಲಿ ಗಂಟೆಗಟ್ಟಲೆ ಸುರಿದ ಮಳೆ: ಜನಜೀವನ ಅಸ್ತವ್ಯಸ್ತ

08/06/2024
ಚಿಕ್ಕಮಗಳೂರು: ಕಳೆದ ನಾಲ್ಕೈದು ದಿನಗಳಿಂದ ಒಂದಷ್ಟು ಬಿಡುವು ನೀಡಿದ್ದ ಮಳೆರಾಯ, ಇದೀಗ ಮತ್ತೆ ಅಬ್ಬರಿಸುತ್ತಿದೆ. ಮಲೆನಾಡಲ್ಲಿ ಗಂಟೆಗಟ್ಟಲೆ ಮಳೆ ಸುರಿದಿದೆ.
ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಣಕಲ್, ಬಾಳೂರು ಸುತ್ತಮುತ್ತ ಭಾರೀ ಮಳೆಯಾಗಿದೆ. ಕಳೆದೊಂದು ಗಂಟೆಯಿಂದ ಧಾರಾಕಾರವಾಗಿ ಮಳೆ ಸುರಿದಿದೆ.
ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಳೆಗೆ ವಾಹನ ಸವಾರರು ಪರದಾಡುವಂತಾಗಿದೆ. ಕೊಟ್ಟಿಗೆಹಾರದಲ್ಲೇ ವಾಹನ ಸವಾರರು ವಾಹನ ನಿಲ್ಲಿಸಿಕೊಂಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97