ಮಳೆ ಅನಾಹುತ: ಬಹುಮಹಡಿ ಕಟ್ಟಡದ ಗೋಡೆ ಕುಸಿದು 9 ಮಂದಿಯ ದಾರುಣ ಸಾವು - Mahanayaka
1:18 PM Thursday 16 - October 2025

ಮಳೆ ಅನಾಹುತ: ಬಹುಮಹಡಿ ಕಟ್ಟಡದ ಗೋಡೆ ಕುಸಿದು 9 ಮಂದಿಯ ದಾರುಣ ಸಾವು

vellur
19/11/2021

ವೆಲ್ಲೂರು: ಭಾರೀ ಮಳೆಯಿಂದಾಗಿ ದೇಶಾದ್ಯಂತ ಭಾರೀ ಅನಾಹುತಗಳು ಸಂಭವಿಸಿದ್ದು, ತಮಿಳುನಾಡಿನ ವೆಲ್ಲೂರಿನಲ್ಲಿ ದೊಡ್ಡ ದುರ್ಘಟನೆಯೊಂದು ನಡೆದಿದ್ದು, ಬಹುಮಹಡಿ ಕಟ್ಟಡದ ಗೋಡೆ ಕುಸಿದು 9 ಮಂದಿ ಮೃತಪಟ್ಟಿದ್ದಾರೆ.


Provided by

ಮೃತಪಟ್ಟವರ ಪೈಕಿ ನಾಲ್ಕು ಜನ ಮಕ್ಕಳು ಸೇರಿದ್ದಾರೆ ಎಂದು ತಿಳಿದು ಬಂದಿದೆ. ವೆಲ್ಲೋರಿನ ಪೆರ್ನಂಪಟ್ಟು ಪ್ರದೇಶದಲ್ಲಿ 50 ಕ್ಕೂ ಹೆಚ್ಚು ಕುಟುಂಬಗಳು ವಾಸವಿದ್ದ ಬಡಾವಣೆಯಲ್ಲಿ ಶುಕ್ರವಾರ ಈ ದುರಂತ ಸಂಭವಿಸಿದ್ದು, ಜನರನ್ನು ಬೆಚ್ಚಿ ಬೀಳಿಸಿದೆ.

ಘಟನೆಯಲ್ಲಿ 9 ಮಂದಿ ಮೃತಪಟ್ಟಿದ್ದರೆ, ಅನೇಕ ಮಂದಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೆರ್ನಂಪಟ್ಟು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಭಾರೀ ಮಳೆಗೆ 3 ಮಂದಿ ಸಾವು: ಪ್ರವಾಹದ ಪರಿಣಾಮ 30 ಮಂದಿ ನಾಪತ್ತೆ

6 ಮಕ್ಕಳನ್ನು ರಕ್ಷಿಸಿ ಕಣಜದ ಹುಳುಗಳಿಗೆ ಬಲಿಯಾದ ಗೃಹ ರಕ್ಷಕ ಸಿಬ್ಬಂದಿ

ಸೆಗಣಿ ತಿಂದು, ನೀವೂ ತಿನ್ನಿ ಎಂದು ಕರೆ ನೀಡಿದ ಹುಚ್ಚ ವೈದ್ಯ!

ಬಿಗ್ ನ್ಯೂಸ್: ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದ ಮೋದಿ ಸರ್ಕಾರ!

ಹಂಸಲೇಖ ವಿರುದ್ಧ ದೂರು ನೀಡಿದ ವ್ಯಕ್ತಿಯ ವಿರುದ್ಧವೂ ದೂರು ದಾಖಲು

ಒಂದು ಕೆನ್ನೆಗೆ ಹೊಡೆದಾಗ ಇನ್ನೊಂದು ಕೆನ್ನೆ ತೋರಿಸಿದರೆ, ಸಿಗೋದು ಸ್ವಾತಂತ್ರ್ಯ ಅಲ್ಲ, ಭಿಕ್ಷೆ | ಮತ್ತೆ ಕಂಗನಾ ಟೀಕೆ

ಇಂದು ಪುನೀತ್ ನಮನ: ಸ್ಟಾರ್ ನಟರು ಭಾಗಿಯಾಗುವ ಸಾಧ್ಯತೆ | ಪಾಸ್ ಇದ್ದವರಿಗೆ ಮಾತ್ರ ಎಂಟ್ರಿ!

ಇತ್ತೀಚಿನ ಸುದ್ದಿ