ಸದ್ಯಕ್ಕಿಲ್ಲ ದರ್ಶನ್ ಗೆ ಮನೆಯೂಟ!: ನ್ಯಾಯಾಲಯದಲ್ಲಿ ಏನೇನು ನಡೀತು? - Mahanayaka

ಸದ್ಯಕ್ಕಿಲ್ಲ ದರ್ಶನ್ ಗೆ ಮನೆಯೂಟ!: ನ್ಯಾಯಾಲಯದಲ್ಲಿ ಏನೇನು ನಡೀತು?

actor darshan
22/07/2024

ಬೆಂಗಳೂರು: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಅವರು ತಮಗೆ ಮನೆ ಊಟ ಪಡೆದುಕೊಳ್ಳಲು ಅವಕಾಶ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜುಲೈ 25ಕ್ಕೆ ಆದೇಶ ಕಾಯ್ದಿರಿಸಿದೆ.

ಆರೋಪಿಗೆ ಜೈಲಿನಲ್ಲಿ ಇರುವಾಗ ಮನೆಯ ಊಟ ಪಡೆಯಬಹುದು. ಇದು ವಿಚಾರಣಾಧೀನ ಕೈದಿಯ ಹಕ್ಕು. ಜೈಲಿನ ನಿಯಮಗಳಲ್ಲಿ ಇದರ ಉಲ್ಲೇಖ ಇದೆ ಎಂದು ನಟ ದರ್ಶನ್ ಪರ ವಕೀಲರು ವಾದಿಸಿದರು.

ಆರೋಪಿಗೆ ಕೆಲವೊಂದು ನಿಬಂಧನೆಗಳನ್ನು ಹೇಳಿ ಅವಕಾಶ ಕೊಡಿಸಬಹುದು. ತಮ್ಮದೇ ವೆಚ್ಚದಲ್ಲಿ ಇದನ್ನು ಪಡೆಯಲು ಅವಕಾಶವನ್ನು ಹೊಂದಿಸಲಾಗಿದೆ. ಕೊಲೆಯ ಆರೋಪಿಗಳಿಗೆ ವಿನಾಯಿತಿ ನೀಡಲಾಗಿದೆ ಎಂದು ಅವರು ವಾದಿಸಿದರು.

ಸೆಕ್ಷನ್ 30 ರ ಪ್ರಕಾರ ಜೈಲಿನಲ್ಲಿ ಇರುವ ಆರೋಪಿ ಮನೆಯ ಊಟ ಪಡೆಯಬಹುದು. ಅಲ್ಲದೇ ಮನೆಯಿಂದ ಹಾಸಿಗೆ ವ್ಯವಸ್ಥೆ ಮತ್ತು ಪುಸ್ತಕಗಳನ್ನು ಹೊಂದುವ ಅವಕಾಶ ಇದೆ . ಈ ಎಲ್ಲಾ ಅವಕಾಶಗಳನ್ನು ಆರೋಪಿಗಳಿಗೆ ಒದಗಿಸಿಕೊಡಬಹುದು ಎಂದು ದರ್ಶನ್ ಪರ ವಕೀಲರು ವಾದಿಸಿದರು.

ಇನ್ನೂ ದರ್ಶನ್ ಗೆ ಅಜೀರ್ಣವಾಗುತ್ತಿದೆ. ಫುಡ್ ಪಾಯ್ಸನ್ ಆಗಿದೆ, ಭೇದಿ ಆಗುತ್ತಿದೆ ಎಂದು ಮೆಡಿಕಲ್ ರಿಪೋರ್ಟ್ ಸಲ್ಲಿಕೆ ಮಾಡಲಾಗಿದೆ. ಆದರೆ ದರ್ಶನ್ ಗೆ ಒಂದು ಬಾರಿ ಭೇದಿಯಾಗಿದೆ ಎಂದು ದರ್ಶನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿಲ್ಲ ಎಂದು ಪೊಲೀಸ್ ಪರ ವಾದ ಸಲ್ಲಿಸಲಾಯಿತು.

ದರ್ಶನ್ ತಮ್ಮ ಕೈಗೆ ಮಾತ್ರ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೈಲಿನ ನಿಯಮಗಳ ಪ್ರಕಾರ ಮನೆಯ ಊಟ ಎನ್ನುವುದರ ಬಗ್ಗೆ ಉಲ್ಲೇಖ ಇಲ್ಲ. ಅನಾರೋಗ್ಯದ ಸಮಯದಲ್ಲಿ ಮಾತ್ರ ವಿಶೇಷ ಊಟ ನೀಡಬಹುದು ಹೊರತು ಮನೆಯ ಊಟವನ್ನೇ ನೀಡಬೇಕು ಎಲ್ಲೂ ಉಲ್ಲೇಖ ಮಾಡಿಲ್ಲ ಎಂದು ವಾದಿಸಲಾಯಿತು.

ವಾದ ವಿವಾದಗಳನ್ನು ಕೇಳಿದ ನ್ಯಾಯಾಲಯ ಜುಲೈ 25ಕ್ಕೆ ಆದೇಶ ಕಾಯ್ದಿರಿಸಿದೆ. ಹೀಗಾಗಿ ಮುಂದಿನ ತೀರ್ಪಿಗೆ ಜುಲೈ 25ವರೆಗೆ ದರ್ಶನ್ ಕಾಯಲೇ ಬೇಕಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ