11:48 PM Thursday 21 - August 2025

7.71 ಲಕ್ಷ ರೂಪಾಯಿ ವಿದ್ಯುತ್‌ ಬಿಲ್‌ ನೋಡಿ ಮನೆ ಮಾಲಿಕ ಶಾಕ್!

electricity bill
16/06/2023

ಮನೆಯೊಂದಕ್ಕೆ 7.71 ಲಕ್ಷ ರೂಪಾಯಿ ವಿದ್ಯುತ್‌ ಬಿಲ್‌ ಕೊಟ್ಟ ಘಟನೆ ಮಂಗಳೂರಲ್ಲಿ ಬೆಳಕಿಗೆ ಬಂದಿದೆ. ಕೆಇಆರ್‌ಸಿ ಆದೇಶದಂತೆ ಈ ತಿಂಗಳು ವಿದ್ಯುತ್ ದರ ಏರಿಕೆಯಾಗಿದೆಯೇನೂ ನಿಜ. ಆದ್ರೆ ಮಂಗಳೂರು ನಗರದ ಉಳ್ಳಾಲ ಬೈಲ್‌ನ ಮನೆ ಯೊಂದಕ್ಕೆ 7.71ಲಕ್ಷ ರೂಪಾಯಿ ವಿದ್ಯುತ್ ಬಿಲ್ ಬಂದದನ್ನ ಕಂಡು ಮನೆ ಮಾಲಕ ಶಾಕ್ ಆಗಿದ್ದಾರೆ.

ಉಳ್ಳಾಲ ಬೈಲ್ ನ ಸದಾಶಿವ ಆಚಾರ್ಯ ಎಂಬುವವರ ಮನೆಗೆ ನಿನ್ನೆ ಬಂದ ಬಿಲ್ ರೀಡರ್ 7,71,072 ಬಿಲ್ ನೀಡಿ ತೆರಳಿದ್ದಾರೆ. ಮನೆ ಮಂದಿ 7 ಲಕ್ಷ ಬಿಲ್ ನೋಡಿ, ಬಿಲ್ ರೀಡಿಂಗ್ ಮಾಡಿದ ವ್ಯಕ್ತಿಯಲ್ಲಿ ವಿಚಾರಿಸಿದಾಗ ಆತ ಅದೆಲ್ಲ ನನಗೆ ಗೊತ್ತಿಲ್ಲ. ಮೆಸ್ಕಾಂ ಕಚೇರಿಗೆ ಹೋಗಿ ವಿಚಾರಿಸಿ ಎಂದು ಹೇಳಿದ್ದಾನೆ.

ವಿದ್ಯುತ್ ಬಿಲ್ ರಶೀದಿಯಲ್ಲಿ 99,338 ಯೂನಿಟ್ ಖರ್ಚಾಗಿದ್ದು 7,71,072 ರೂ. ಬಿಲ್ ನಮೂದಿಸಲಾಗಿದೆ. ತಮಗೆ ಈ ಮೊದಲು 3,000 ರೂಪಾಯಿನಷ್ಟು ಮಾಸಿಕ ವಿದ್ಯುತ್ ಬಿಲ್ ಬರುತ್ತಿತ್ತು. ನಾವು ಪ್ರತಿ ತಿಂಗಳು ಬಿಲ್ಲನ್ನ ಕಟ್ಟುತ್ತೇವೆ. ಈ‌ ತಿಂಗಳು ಬಂದ ಬಿಲ್ ನೋಡಿ ಮನೆ ಮಂದಿ ಎಲ್ಲ ನಿಜಕ್ಕೂ ಶಾಕ್ ಆದೆವು ಎಂದು ಮನೆ ಮಾಲಕ ಸದಾಶಿವ ಆಚಾರ್ಯ ಹೇಳಿದ್ದಾರೆ.

ಏಜೆನ್ಸಿಗಳ ಮುಖಾಂತರ ಬಿಲ್ ಕಲೆಕ್ಷನ್ ಮಾಡಲಾಗುತ್ತದೆ. ಬಿಲ್ ರೀಡರ್ ಎಡವಟ್ಟಿನಿಂದ ತಪ್ಪಾಗಿ ವಿದ್ಯುತ್ ಬಿಲ್ ಮುದ್ರಣ ಆಗಿದೆ. ಬಿಲ್ಲಲ್ಲಿ ಲೋಪ ಕಂಡು ಬಂದರೆ ಅದನ್ನ ಗ್ರಾಹಕರಿಗೆ ಕೊಡುವಂತಿಲ್ಲ. ತಕ್ಷಣವೇ ಸದಾಶಿವ ಆಚಾರ್ಯ ಅವರ ಮನೆ ಬಾಗಿಲಿಗೆ ಪರಿಷ್ಕೃತ ಬಿಲ್ ತಲುಪಿಸುವುದಾಗಿ ಹೇಳಿದ್ರು. ಇದೀಗ ಪರಿಷ್ಕೃತ 2,833 ರೂಪಾಯಿ ಬಿಲ್ ಆಚಾರ್ಯ ಅವರ ಮನೆ ತಲುಪಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version