ಗಾಳಿ–ಮಳೆಗೆ ಮನೆ ಗೋಡೆ ಕುಸಿತ: ಅಚ್ಚರಿಯಂತೆ ಪ್ರಾಣಾಪಾಯದಿಂದ ಪಾರು

26/05/2025
ಕೊಟ್ಟಿಗೆಹಾರ: ಮಲೆನಾಡಿನಲ್ಲಿ ಗಾಳಿ–ಮಳೆಯ ಅಬ್ಬರ ಮುಂದುವರೆದಿದ್ದು, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ತೀವ್ರ ಪರಿಣಾಮ ಬೀರಿದೆ. ತರುವೆ ಗ್ರಾಮದಲ್ಲಿ ಸಂಭವಿಸಿದ ಭಾರೀ ಗಾಳಿ-ಮಳೆಗೆ ಲಕ್ಷ್ಮಿ ಎಂಬುವರಿಗೆ ಸೇರಿದ ಮನೆ ಗೋಡೆ ಭಾಗಶಃ ಕುಸಿದಿದೆ.
ಘಟನೆಯ ಸಮಯದಲ್ಲಿ ಮನೆಯೊಳಗಿದ್ದವರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಘಟನೆ ಬಳಿಕ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಂಜೆ ವೇಳೆಗೆ ಮಲೆನಾಡಿನಲ್ಲಿ ಮತ್ತೆ ಗಾಳಿ–ಮಳೆಯ ಪ್ರಮಾಣ ಹೆಚ್ಚಾಗಿದ್ದು, ಜನಜೀವನಕ್ಕೆ ತೊಂದರೆಯಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD