ಬೆಳ್ತಂಗಡಿಯ ಮೂವರನ್ನು ತುಮಕೂರಿನಲ್ಲಿ ಕೊಂದಿದ್ದು ಹೇಗೆ?: ಬೆಚ್ಚಿಬೀಳಿಸುವಂತಿದೆ ಆರೋಪಿಗಳ ಕೃತ್ಯ!

belthagady
26/03/2024

ಬೆಳ್ತಂಗಡಿ: ತುಮಕೂರು ತಾಲೂಕಿನ ಕುಚ್ಚಂಗಿ ಗ್ರಾಮದ ಕೆರೆಯಲ್ಲಿ ಸುಟ್ಟು ಕರಕಲಾಗಿದ್ದ ಕಾರಿನಲ್ಲಿ ಪತ್ತೆಯಾಗಿದ್ದ ಮೂರು ಮೃತದೇಹಗಳಿಗೆ ಸಂಬಂಧಿಸಿದಂತೆ ತುಮಕೂರು ಜಿಲ್ಲಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತುಮಕೂರಿನ ಶಿರಾ ಗೇಟ್ ಬಡಾವಣೆಯಲ್ಲಿ ವಾಸವಾಗಿರುವ ಪಾತರಾಜು ಮತ್ತು ಗಂಗರಾಜು ಎಂಬ ಇಬ್ಬರು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಅಲ್ಲದೆ ಈಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಆರು ಮಂದಿ ಆರೋಪಿಗಳ ಹುಡುಕಾಟದಲ್ಲಿ ತೊಡಗಿದ್ದಾರೆ. ಆರೋಪಿಗಳು ಈಗಾಗಲೇ ಕೊಲೆಯಾಗಿರುವ ಇಶಾಕ್ ಸೀಮಮ್, ಶಾಹುಲ್ ಹಮೀದ್, ಸಿದ್ದಿಕ್ ಅವರೊಂದಿಗೆ ಸಂಪಕ೵ ಹೊಂದಿದ್ದರು.

ಅಲ್ದೆ ಈ ಮೂವರು ಮೃಪಟ್ಟವರು ಆರೋಪಿ ಪಾತರಾಜುವಿನ ಜೊತೆ ಸೇರಿ ಸುಮಾರು ಆರು ತಿಂಗಳಿನಿಂದ ನಿಧಿ ಹುಡುಕುವ ಕೆಲಸ ಮಾಡುತ್ತಿದ್ದರು. ನಿಧಿ ಹುಡುಕಾಟಕ್ಕಾಗಿ ಪಾತರಾಜನಿಗೆ ಸುಮಾರು ಆರು ಲಕ್ಷ ರೂ. ಹಣವನ್ನು ಮೃತರು ನೀಡಿದ್ದರು. ಹಣ ಪಡೆದು ಆರು ತಿಂಗಳು ಕಳೆದರೂ ನಿಧಿ ಹುಡುಕಿ ಕೊಟ್ಟಿಲ್ಲವಾದ್ದರಿಂದ ಹಣ ವಾಪಸ್ ಕೊಡುವಂತೆ ಇಲ್ಲವಾದರೆ ಪೊಲೀಸರಿಗೆ ದೂರು ನೀಡುವುದಾಗಿ ಮೃತರು ಪಾತರಾಜನ ಹಿಂದೆ ಬಿದ್ದಿದ್ದರಿಂದ ಅವರನ್ನು ಹೇಗಾದರೂ ಮಾಡಿ ಕೊಲೆ ಮಾಡಬೇಕೆಂಬ ಉದ್ದೇಶದಿಂದ ಪಾತರಾಜು ತನಗೆ ಪರಿಚಯದ ಸತ್ಯಮಂಗಲದ ವಾಸಿ ಗಂಗರಾಜು ಮತ್ತು ಅವನ 6 ಜನ ಸಹಚರರಾದ ಪುಟ್ಟಸ್ವಾಮಯ್ಯ, ನವೀನ್, ಕೃಷ್ಣ, ಗಣೇಶ, ಕಿರಣ್ , ಸೈಮನ್ ಅವರೊಂದಿಗೆ ಸೇರಿಕೊಂಡು ಕೃತ್ಯ ಎಸಗಿದ್ದಾನೆ.

ಮೂರು ಜನರನ್ನು ಕೊಲೆ ಮಾಡಿದರೆ ಆರೋಪಿತರಿಗೆ 3 ಕೆ.ಜಿ. ಚಿನ್ನ ಕೊಡುವ ಆಮಿಷವನ್ನು ಪ್ರಮುಖ ಆರೋಪಿ ಪಾತರಾಜು ಮುಂದಿಟ್ಟಿದ್ದ.

ಮಾರ್ಚ್ 22ರಂದು ಬೆಳಗಿನ ಜಾವ 12 ಗಂಟೆಗೆ ಮೃತರನ್ನು ಚಿನ್ನ ನೀಡುವುದಾಗಿ ಬೀರನಕಲ್ಲು ಬೆಟ್ಟದ ಸಮೀಪ ಕರೆಸಿಕೊಂಡು ಅವರನ್ನು ಮಚ್ಚು , ಲಾಂಗ್, ಡರ್ಯಾಗರ್ ನಿಂದ ಚುಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದರು. ನಂತರ ಅವರದೇ ಕಾರಿನಲ್ಲಿ ಕುಚ್ಚಂಗಿ ಕೆರೆಗೆ ತೆಗೆದುಕೊಂಡು ಹೋಗಿ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದರು. ಈ ಸಂಬಂಧ ಕೋರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

 

ಇತ್ತೀಚಿನ ಸುದ್ದಿ

Exit mobile version