4:28 PM Saturday 27 - December 2025

ಹುಬ್ಬಳ್ಳಿ: ಮರ್ಯಾದೆಗೇಡು ಹತ್ಯೆ ಪ್ರಕರಣ: ಕರ್ತವ್ಯ ಲೋಪದಡಿ ಬೆಳಗಲಿ ಪಿಡಿಒ ಅಮಾನತು

manya
27/12/2025

ಹುಬ್ಬಳ್ಳಿ: ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಮರ್ಯಾದೆಗೇಡು ಹತ್ಯೆ (Honor Killing) ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ತವ್ಯದಲ್ಲಿ ಬೇಜವಾಬ್ದಾರಿತನ ಪ್ರದರ್ಶಿಸಿದ ಆರೋಪದ ಮೇಲೆ ಬೆಳಗಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ನಾಗರಾಜ ಗಿರಿಯಪ್ಪನವರ ಅವರನ್ನು ಅಮಾನತುಗೊಳಿಸಲಾಗಿದೆ.

ಧಾರವಾಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಭುವನೇಶ್ ಪಾಟೀಲ ಅವರು ಈ ಅಮಾನತು ಆದೇಶ ಹೊರಡಿಸಿದ್ದಾರೆ. ಈ ಪ್ರಕರಣದಲ್ಲಿ ಪಿಡಿಒ ಹಲವು ಹಂತಗಳಲ್ಲಿ ಕರ್ತವ್ಯ ಲೋಪ ಎಸಗಿರುವುದು ಕಂಡುಬಂದಿದೆ

ಸಾಮಾಜಿಕ ಸ್ಥಾಯಿ ಸಮಿತಿ ಸದಸ್ಯರನ್ನು ಕರೆದು ಸಭೆ ನಡೆಸಿ, ಕೈಗೊಂಡ ಕ್ರಮಗಳ ಕುರಿತು ಠರಾವು ಪಾಸು ಮಾಡದಿರುವುದು, ಹತ್ಯೆಗೀಡಾದ ಯುವತಿ ಮಾನ್ಯಾ ಅವರ ಶವ ಸಂಸ್ಕಾರದ ವೇಳೆ ನಡೆದ ಸಮಾಲೋಚನಾ ಸಭೆಯಲ್ಲಿ ಪಾಲ್ಗೊಳ್ಳದಿರುವುದು. ಶವ ಸಂಸ್ಕಾರದ ಸಂದರ್ಭದಲ್ಲಿ ಪೊಲೀಸರು ಪಂಚಾಯಿತಿ ಸಿಬ್ಬಂದಿಯ ಸಹಾಯ ಕೇಳಿದಾಗ ಸೂಕ್ತವಾಗಿ ಸ್ಪಂದಿಸದೆ ಶಿಷ್ಟಾಚಾರ ಉಲ್ಲಂಘಿಸಿರುವುದು. ಮೇಲ್ನೋಟಕ್ಕೆ ಪಿಡಿಒ ಅವರ ಬೇಜವಾಬ್ದಾರಿತನ ಸಾಬೀತಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಪೊಲೀಸ್ ಕಾನ್‌ ಸ್ಟೆಬಲ್‌ ಗಳನ್ನು ಕೂಡ ಅಮಾನತುಗೊಳಿಸಲಾಗಿತ್ತು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version