ಹುಬ್ಬಳ್ಳಿ: ಅತ್ಯಾಚಾರ ಆರೋಪಿ ಎನ್ ಕೌಂಟರ್ ಕೇಸ್: ಪೊಲೀಸರಿಗೆ ಹೊಸ ತಲೆನೋವು! - Mahanayaka
2:32 PM Thursday 18 - September 2025

ಹುಬ್ಬಳ್ಳಿ: ಅತ್ಯಾಚಾರ ಆರೋಪಿ ಎನ್ ಕೌಂಟರ್ ಕೇಸ್: ಪೊಲೀಸರಿಗೆ ಹೊಸ ತಲೆನೋವು!

hubballi
29/04/2025

ಹುಬ್ಬಳ್ಳಿ: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಬಳಿಕ ಕೊಲೆ ಮಾಡಿದ ಪ್ರಕರಣದ ಆರೋಪಿಯನ್ನು ಎನ್ ಕೌಂಟರ್ ಮಾಡಿರುವ  ಪ್ರಕರಣ ದೇಶಾದ್ಯಂತ ಸುದ್ದಿಯಾಗಿತ್ತು. ಇದೀಗ ಈ ಪ್ರಕರಣಕ್ಕೆ ಮಾನವ ಹಕ್ಕುಗಳ ಆಯೋಗ ಎಂಟ್ರಿಯಾಗಿದೆ.


Provided by

ಎಪ್ರಿಲ್ 13 ರಂದು ಹುಬ್ಬಳ್ಳಿಯಲ್ಲಿ ಬಿಹಾರ್ ಮೂಲದ ರಿತೇಶ್ ಕುಮಾರ್ ಎಂಬಾತ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ನಂತರ ಕೊಲೆ ಮಾಡಿದ್ದ ಎಂದು ಆರೋಪಿಸಲಾಗಿತ್ತು.  ಈ ಆರೋಪಿಯನ್ನು ವಿಚಾರಣೆಗೂ ಮುನ್ನವೇ ಎನ್ ಕೌಂಟರ್ ಮಾಡಲಾಗಿತ್ತು. ಈ ಎನ್ ಕೌಂಟರ್ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿತ್ತು. ಆದರೆ ಇದೀಗ ಮಾನವ ಹಕ್ಕುಗಳ ಆಯೋಗ ಈ ಪ್ರಕರಣದ ವಿಚಾರಣೆ ಆರಂಭ ಮಾಡಿದ್ದು, ಪೊಲೀಸರಿಗೆ ತಲೆಬಿಸಿಯಾಗಿ ಪರಿಣಮಿಸಿದೆ.

ಘಟನೆ ನಡೆದು 15 ದಿನವಾದರೂ ಇಲ್ಲಿವರೆಗೆ ಆರೋಪಿ ಕುಟುಂಬದವರು ಸಿಕ್ಕಿಲ್ಲ. ಹೀಗಾಗಿ ಆರೋಪಿ ಶವ ಕಿಮ್ಸ್ ಶವಾಗಾರದಲ್ಲಿ ಅನಾಥವಾಗಿದೆ.

ಸೋಮವಾರ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಶಾಮ್ ಭಟ್ ಮತ್ತು ಸದಸ್ಯ ವಂಟಗೋಡಿ ಹುಬ್ಬಳ್ಳಿಗೆ ಆಗಮಿಸಿ, ಕೊಲೆಯಾದ ಬಾಲಕಿ ಮನೆಗೆ ಭೇಟಿ‌ ನೀಡಿ, ಕುಟುಂಬಕ್ಕೆ ಸಾಂತ್ವಾನ ಹೇಳಿ ನಂತರ ಮಾಹಿತಿ ಪಡೆದರು. ನಂತರ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದಾದ ನಂತರ ಎನ್ಕೌಂಟರ್ ನಡೆದ ಹುಬ್ಬಳ್ಳಿ ಹೊರವಲಯದ ರಾಯನಾಳ ಸೇತುವೆ ಬಳಿಯಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ