ಕಸ್ತೂರಿ ರಂಗನ್ ವರದಿ ವಿರುದ್ಧ ಶಿರಾಡಿ ಗ್ರಾಮದ ಗುಂಡ್ಯದಲ್ಲಿ ಬೃಹತ್ ಪ್ರತಿಭಟನೆ
ಕಡಬ: ಕಸ್ತೂರಿ ರಂಗನ್ ವರದಿ ವಿರುದ್ಧ ಶಿರಾಡಿ ಗ್ರಾಮದ ಗುಂಡ್ಯದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆ ವೇಳೆ, ಪುತ್ತೂರು ಸಹಾಯಕ ಆಯುಕ್ತರು ಸ್ಥಳಕ್ಕೆ ಆಗಮಿಸಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು, ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಈ ಸಂದರ್ಭ ಮಾತನಾಡಿದ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ ಮಾತನಾಡಿ, ರೈತರೆಂದರೆ ಹೆಬ್ಬೆಟ್ಟಲ್ಲ, ವಿವಿಧ ಕ್ಷೇತ್ರಗಳಲ್ಲಿ ವಿದ್ಯಾಭ್ಯಾಸ ಪಡೆದು ವಿದ್ಯಾವಂತರಾಗಿರುವವರೂ ಇದ್ದಾರೆ. ನಾವು ಮಾನಸಿಕವಾಗಿ ಪ್ರತಿಭಟನೆಗೆ ಸಜ್ಜಾಗಿದ್ದೇವೆ. ಯಾವ ಕೇಸ್ ಗೂ ಹೆದರುವುದಿಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ನಮ್ಮ ಬೇಡಿಕೆಗಳನ್ನ ಪರಿಗಣಿಸದಿದ್ದಲ್ಲಿ ಬೆಂಗಳೂರು ಚಲೋಗೂ ನಾವು ಸಿದ್ಧರಿದ್ದೇವೆ ಎಂದ ಕಿಶೋರ್, ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಾಯಕರು ಮುಂದೆ ನಿಂತು ಮಲೆನಾಡ ಜನರ ಸಮಸ್ಯೆಯನ್ನು ಬಗೆ ಹರಿಸಬೇಕು ಎಂದು ಒತ್ತಾಯಿಸಿದರು.
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸಭೆ ಉದ್ಘಾಟಿಸಿದರು. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಸಕಲೇಶಪುರ ಶಾಸಕ ಸಿಮೆಂಟ್ ಮಂಜು, ಮಾಜಿ ಶಾಸಕ ಸಂಜೀವ ಮಠಂದೂರು, ಧರ್ಮಗುರುಗಳಾದ ರೆ.ಫಾ. ಆದರ್ಶ್ ಜೋಸೆಫ್, ರೆ.ಫಾ. ಸಿಬಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೃಷ್ಣ ಶೆಟ್ಟಿ ಕಡಬ, ಪಿ.ಪಿ. ವರ್ಗೀಸ್, ಸರ್ವೋತ್ತಮ ಗೌಡ, ಆಶಾ ತಿಮ್ಮಪ್ಪ ಗೌಡ, ಹರೀಶ್ ಕಂಜಿಪಿಲಿ, ವೆಂಕಟ್ ದಂಬೆಕೋಡಿ, ಪ್ರಮುಖರಾದ ಎ.ವಿ.ತೀರ್ಥರಾಮ, ವೆಂಕಪ್ಪ ಗೌಡ ಸುಳ್ಯ, ವೆಂಕಟ್ ವಳಲಂಬೆ, ಸುಧೀರ್ ಕುಮಾರ್ ಶೆಟ್ಟಿ, ಮಹಮ್ಮದ್ ಅಲಿ ಹೊಸಮಠ ಸೇರಿದಂತೆ ಹಲವು ಸಂಘಟನೆಗಳ ಮುಖಂಡರು ಭಾಗಿಯಾಗಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: