ಸೌಜನ್ಯಾ ಸಮಾಧಿಯ ಬಳಿಯಲ್ಲೇ ಆಕೆಯ ದೊಡ್ಡ ಪ್ರತಿಮೆಯನ್ನು ಸ್ಥಾಪಿಸುತ್ತೇವೆ:  ಮಹೇಶ್‌ ಶೆಟ್ಟಿ ತಿಮರೋಡಿ - Mahanayaka

ಸೌಜನ್ಯಾ ಸಮಾಧಿಯ ಬಳಿಯಲ್ಲೇ ಆಕೆಯ ದೊಡ್ಡ ಪ್ರತಿಮೆಯನ್ನು ಸ್ಥಾಪಿಸುತ್ತೇವೆ:  ಮಹೇಶ್‌ ಶೆಟ್ಟಿ ತಿಮರೋಡಿ

mahesh shetty timarody
23/06/2023

ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ತನಿಖಾಧಿಕಾರಿಗಳು, ಪೊಲೀಸರು ಮತ್ತು ವೈದ್ಯಕೀಯ ವರದಿ ನೀಡಿರುವ ವೈದ್ಯರು ಲೋಪ ಎಸಗಿರುವುದು ಸ್ಪಷ್ಟವಾಗಿದೆ. ಇವರ ವಿರುದ್ಧ ಹೈಕೋರ್ಟ್‌ ಮೊರೆ ಹೋಗುತ್ತೇವೆ ಎಂದು ಹತ್ಯೆಗೀಡಾದ ಸೌಜನ್ಯಾ ಕುಟುಂಬದ ಪರವಾಗಿ ಹೋರಾಟ ನಡೆಸುತ್ತಿರುವ ಬೆಳ್ತಂಗಡಿಯ ಪ್ರಜಾಪ್ರಭುತ್ವ ವೇದಿಕೆಯ ಮುಖ್ಯಸ್ಥ ಮಹೇಶ್‌ ಶೆಟ್ಟಿ ತಿಮರೋಡಿ ಹಾಗೂ ವಕೀಲೆ ಅಂಬಿಕಾ ಪ್ರಭು ತಿಳಿಸಿದ್ದಾರೆ.

ಅವರು ಮಂಗಳೂರು ನಗರದ ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದ ಅವರು, ಸಂತೋಷ್‌ ರಾವ್‌ ಅವರ ಮಾನವ ಹಕ್ಕು ಉಲ್ಲಂಘನೆ ಆಗಿರುವ ಬಗ್ಗೆಯೂ ಪೊಲೀಸ್‌ ಇಲಾಖೆ ವಿರುದ್ಧ ಹೋರಾಟ ನಡೆಸುತ್ತೇವೆ ಎಂದರು. ಆರೋಪಿ ಸಂತೋಷ್‌ ರಾವ್‌ ತಪ್ಪಿತಸ್ಥ ಅಲ್ಲ ಎಂಬುದನ್ನು ನಾವು 10 ವರ್ಷ ಹಿಂದೆಯೇ ಹೇಳಿದ್ದೇವೆ. ಆದರೆ, ಪೊಲೀಸರು ಒತ್ತಡಕ್ಕೆ ಮಣಿದು, ಸಂತೋಷ್‌ ರಾವ್‌ ಅವರನ್ನು ತಪ್ಪಿತಸ್ಥನಾಗಿಸಿ, ನಿಜವಾದ ಅಪರಾಧಿಗಳನ್ನು ರಕ್ಷಿಸಲು ವ್ಯವಸ್ಥೆ ಮಾಡಿಕೊಂಡಿದ್ದರು. ನಿಜ ಆರೋಪಿಗಳ ವಿರುದ್ಧದ ಎಲ್ಲಾ ಸಾಕ್ಷ್ಯಗಳನ್ನು ಹಂತಹಂತವಾಗಿ ನಾಶಪಡಿಸಿದ್ದರು ಎಂದು ಮಹೇಶ್‌ ಶೆಟ್ಟಿ ಆರೋಪಿಸಿದರು.

ನಮ್ಮ ಹೋರಾಟ ಉಸಿರು ಇರುವವರೆಗೆ ನಡೆಯಲಿದೆ. ಮುಂದಿನ ಹಂತವಾಗಿ ಸೌಜನ್ಯಾ ಅವರ ಸಮಾಧಿಯ ಬಳಿಯಲ್ಲೇ ಆಕೆಯ ದೊಡ್ಡ ಪ್ರತಿಮೆಯನ್ನು ಸ್ಥಾಪಿಸುತ್ತೇವೆ. ಆಕೆ ಒಂದು ಶಕ್ತಿಯಾಗಲಿದ್ದಾಳೆ. ಆ ಮಾರ್ಗವಾಗಿ ಬರುವ ಭಕ್ತರು ಮಾತ್ರವಲ್ಲ, ಅತ್ಯಾಚಾರ ನಡೆಸಿ ಕೊಲೆ ಮಾಡಿದವರು ಸಹ ಅದನ್ನು ನಿತ್ಯವೂ ನೋಡಿಯೇ ಮುಂದೆ ಸಾಗುವಂತಾಗಬೇಕು. ಧರ್ಮದ ಹೆಸರಿನಲ್ಲಿ ನಡೆಯುವ ಧಾರ್ಮಿಕ ಭಯೋತ್ಪಾದನೆಯ ಭೀಕರತೆಯ ಅರಿವು ಎಲ್ಲರಿಗೂ ಆಗಬೇಕು. ನಮ್ಮ ಹೋರಾಟ ಕ್ಷೇತ್ರದ ವಿರುದ್ಧವಲ್ಲ, ಅಪರಾಧಿಗಳ ವಿರುದ್ಧ ಮಾತ್ರ ಎಂದು ಮಹೇಶ್‌ ಶೆಟ್ಟಿ ಹೇಳಿದರು.

ನನಗೆ ನ್ಯಾಯಾಂಗ ವ್ಯವಸ್ಥೆಯ ಮೇಲಿನ ವಿಶ್ವಾಸ ಹೊರಟುಹೋಗಿದೆ. ನಾನು ನಂಬಿರುವುದು ಮಂಜುನಾಥ ಸ್ವಾಮಿ ಮತ್ತು ಅಣ್ಣಪ್ಪನನ್ನು. ಅವರು ನ್ಯಾಯ ಕೊಡಿಸುತ್ತಾರೆ ಎಂಬ ನಂಬಿಕೆ ನನಗಿದೆ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ