ಮನೆ ಮೇಲೆ ಬಿದ್ದ ಬೃಹತ್ ಮರ: ಮನೆಯಲ್ಲಿದ್ದವರು ಜಸ್ಟ್ ಮಿಸ್ - Mahanayaka

ಮನೆ ಮೇಲೆ ಬಿದ್ದ ಬೃಹತ್ ಮರ: ಮನೆಯಲ್ಲಿದ್ದವರು ಜಸ್ಟ್ ಮಿಸ್

chikkamagaluru (1)
17/06/2025


Provided by

ಚಿಕ್ಕಮಗಳೂರು: ಮಲೆನಾಡಲ್ಲಿ ಗಾಳಿ–ಮಳೆ ಅಬ್ಬರ ಮುಂದುವರಿದಿದೆ. ಭಾರೀ ಗಾಳಿ–ಮಳೆಗೆ ಮನೆ ಮೇಲೆ ಬೃಹತ್ ಮರ ಬಿದ್ದು, ಗೃಹಪಯೋಗಿ ವಸ್ತುಗಳು ಸಂಪೂರ್ಣ ನಾಶವಾಗಿದ್ದು, ಮನೆಯಲ್ಲಿದ್ದವರು ಜಸ್ಟ್ ಮಿಸ್ ಆಗಿದ್ದಾರೆ.

ಮರ ಬೀಳುವ ಶಬ್ಧ ಕೇಳುತ್ತಿದ್ದಂತೆ ಮನೆಯಲ್ಲಿದ್ದವರು ಮನೆಯಿಂದ ಓಡಿಬಂದಿದ್ದಾರೆ. ಹೀಗಾಗಿ ಪ್ರಾಣಾಪಾಯ ತಪ್ಪಿದೆ. ಆದರೂ ಪ್ರೇಮ ಎಂಬುವರ ಮೇಲೆ ಮರದ ಟೊಂಗೆ ಬಿದ್ದು ಅವರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕು ಕಳಸ ತಾಲೂಕಿನ ಮರಸಣಿಗೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ತಾಲೂಕು ಆಡಳಿತ, ಗ್ರಾಮ ಪಂಚಾಯಿತಿ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ