ಹುಲಿ ಉಗುರು ಸಾಗಿಸುತ್ತಿದ್ದ ಇಬ್ಬರ ಬಂಧನ: 40 ಉಗುರು, 2 ಹಲ್ಲು ವಶ

ಕಾಳ ಮಾರುಕಟ್ಟೆಗೆ ಹುಲಿ ಉಗುರುಗಳನ್ನು ಸಾಗಾಟ ಮಾಡುತ್ತಿದ್ದಾಗ ಪೊಲೀಸರಿಗೆ ಸಿಕ್ಕಿಬಿದ್ದಿರುವ ಘಟನೆ ಹನೂರು ತಾಲೂಕಿನ ಪಿ.ಜಿ.ಪಾಳ್ಯ ಸಮೀಪ ನಡೆದಿದೆ.
ಹನೂರು ತಾಲೂಕಿನ ಗೋಪಾಲ(35) ಹಾಗೂ ರಾಯಚೂರು ಮೂಲದ ಹನುಮೇಶ(29) ಬಂಧಿತ ಆರೋಪಿಗಳು. ಅಕ್ರಮವಾಗಿ ಹುಲಿ ಉಗುರು ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಕೊಳ್ಳೇಗಾಲ ಅರಣ್ಯ ಸಂಚಾರಿ ದಳದ ಪೊಲೀಸರು ದಾಳಿ ನಡೆಸಿ ಇವರಿಬ್ಬರನ್ನು ಬಂಧಿಸಿದ್ದಾರೆ.
ಬಂಧಿತರಿಂದ 40 ಹುಲಿ ಉಗುರು, 2 ಹಲ್ಲು , 1 ಬೈಕ್ ನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw