ಹುಲ್ಲು ತರಲು ಹೋಗಿದ್ದ ವೇಳೆ ಕಾಡಾನೆ ದಾಳಿ: ವ್ಯಕ್ತಿಯ ದಾರುಣ ಸಾವು - Mahanayaka
4:31 PM Thursday 23 - January 2025

ಹುಲ್ಲು ತರಲು ಹೋಗಿದ್ದ ವೇಳೆ ಕಾಡಾನೆ ದಾಳಿ: ವ್ಯಕ್ತಿಯ ದಾರುಣ ಸಾವು

hunasuru
03/02/2022

ಮೈಸೂರು: ಹುಲ್ಲು ತರಲು ಹೋಗಿದ್ದ ವ್ಯಕ್ತಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ಅವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲೂಕಿನ ಕೊಳವಿಗೆ ಗ್ರಾಮದಲ್ಲಿ ನಡೆದಿದೆ.

55 ವರ್ಷ ವಯಸ್ಸಿನ ರಾಜೇಶ್ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ಹಸುವಿಗೆ ಹುಲ್ಲು ಹಾಕಲು ತಮ್ಮ ಮನೆಯ ಹಿತ್ತಲಿಗೆ ಹೋಗಿದ್ದ ವೇಳೆ ಏಕಾಏಕಿ ದಾಳಿ ನಡೆಸಿದ ಆನೆ ತುಳಿದಿದ್ದು, ಪರಿಣಾಮವಾಗಿ ಅವರು ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿದ್ದರು. ಆದರೆ ಹುಲಿ ಯೋಜನಾ ನಿರ್ದೇಶಕರು ಬರಬೇಕು ಎಂದು ಸ್ಥಳೀಯರು ಪಟ್ಟು ಹಿಡಿದರು.

ಇನ್ನೊಂದೆಡೆ ತಾಲ್ಲೂಕಿನ ನಾಗಾಪುರ ಪುನರ್ವಸತಿ ಕೇಂದ್ರದ 6 ನೇ ಬ್ಲಾಕ್ ನ ರಾಜು ಎಂಬುವವರ ಮನೆಯನ್ನು ಕಾಡಾನೆ ಜಖಂಗೊಳಿಸಿದೆ.  ಬೆಳಿಗ್ಗೆ 6 ಗಂಟೆಗೆ ನುಗ್ಗಿದ ಕಾಡಾನೆ ಹಿಂಡು ಗಿರಿಜನರ ಬೆಳೆಯನ್ನು ಧ್ವಂಸಗೊಳಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಹಾವನ್ನು ರಕ್ಷಿಸಲು ಹೋಗಿ ನಾಲೆಗೆ ಬಿದ್ದ ಕಾರು: ಮಹಿಳೆಯ ದಾರುಣ ಸಾವು

ಪುನೀತ್ ರಾಜ್ ಕುಮಾರ್ ಮನೆಗೆ ಭೇಟಿ ನೀಡಲಿರುವ ಅಲ್ಲು ಅರ್ಜುನ್: ಅಂದೇಕೆ ಭೇಟಿ ನೀಡಿರಲಿಲ್ಲ ಗೊತ್ತಾ?

3 ವರ್ಷದ ಮಗುವನ್ನು ಕರಡಿ ಬೋನಿಗೆ ಎಸೆದ ತಾಯಿ: ಸಿಸಿ ಕ್ಯಾಮರದಲ್ಲಿ ಭಯಾನಕ ದೃಶ್ಯ ಸೆರೆ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್:  ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

 

ಇತ್ತೀಚಿನ ಸುದ್ದಿ