10:45 PM Friday 11 - September 2026

ಮಾದಪ್ಪನ ಸನ್ನಿಧಿಯಲ್ಲಿ ಹುಂಡಿಗಳ ಎಣಿಕೆ: 2.53 ಕೋಟಿ ರೂ. ಸಂಗ್ರಹ

hundi
31/05/2023

ಹನೂರು : ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಮಂಗಳವಾರ ನಡೆದ ಹುಂಡಿಗಳ ಎಣಿಕೆ ಕಾರ್ಯದಲ್ಲಿ 2.53 ಕೋಟಿ ರೂ ಸಂಗ್ರಹವಾಗಿದೆ.

ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಮಂಗಳವಾರ ಬೆಳಿಗ್ಗೆ ಸಿಸಿ ಕ್ಯಾಮೆರಾ ಕಣ್ಗಾವಲು ಹಾಗೂ ಪೋಲಿಸ್ ಬಂದೋಬಸ್ತ್ ನಲ್ಲಿ ಎಣಿಕೆ ಕಾರ್ಯ ಪ್ರಾರಂಭ ಮಾಡಲಾಯಿತು ಎಣಿಕೆ ಕಾರ್ಯವು ರಾತ್ರಿ 10 ಗಂಟೆಯ ವರೆಗೂ ನಡೆಯಿತು.

ಈ ಬಾರಿ ಅಮಾವಾಸ್ಯೆ, ವಿಶೇಷ ದಿನಗಳಲ್ಲಿ, ಸರ್ಕಾರಿ ರಜಾ ದಿನಗಳಂದು ರಾಜ್ಯದ ವಿವಿಧೆಡೆಯಿಂದ ಸಾವಿರರು ಜನರು ಆಗಮಿಸಿದ್ದರು. ವಿದ್ಯಾರ್ಥಿಗಳಿಗೆ ಬೇಸಿಗೆ ರಜಾ ಹಾಗೂ ವಿಧಾನಸಭಾ ಚುನಾವಣೆಯಿದ್ದ ಹಿನ್ನೆಲೆ ಕಳೆದ 32 ದಿನಗಳ ಅವಧಿಯಲ್ಲಿ 2.53,58,519ರೂಗಳು 65 ಗ್ರಾಂ ಚಿನ್ನ ಹಾಗೂ 3.358 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ.

ಶ್ರೀ ಮಲೆ ಮಹದೇಶ್ವರಸ್ವಾಮಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ,  ಉಪಕಾರ್ಯದರ್ಶಿ ಬಸವರಾಜು, ದ್ವಿತೀಯ ದರ್ಜೆ ಸಹಾಯಕ  ಸರಗೂರು ಮಹದೇವಸ್ವಾಮಿ ಬ್ಯಾಂಕ್  ಆಫ್ ಬರೋಡ ವ್ಯವಸ್ಥಾಪಕರು , ಮ.ಬೆಟ್ಟ ಪೊಲೀಸ್ ಸಿಬ್ಬಂದಿಗಳು ಸೇರಿದಂತೆ ಪ್ರಾಧಿಕಾರದ ಸಿಬ್ಬಂದಿ ವರ್ಗದವರು ಹಾಜರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti deneme bonusu veren siteler
Exit mobile version