ಗೃಹಲಕ್ಷ್ಮೀ ಹಣ ಬಂದಿದೆಯೇ ಎಂದು ಚೆಕ್ ಮಾಡಲು ಬ್ಯಾಂಕ್ ಮುಂದೆ ಕ್ಯೂನಿಂತ ನೂರಾರು ಮಹಿಳೆಯರು!

04/09/2023
ಚಿಕ್ಕಮಗಳೂರು: ರಾಜ್ಯ ಸರ್ಕಾರ ಮಹಿಳೆಯರಿಗಾಗಿ ಜಾರಿಗೆ ತಂದ ಗೃಹ ಲಕ್ಷ್ಮೀ ಯೋಜನೆಯ ಹಿನ್ನೆಲೆಯಲ್ಲಿ ಮಹಿಳೆಯರು ತಮ್ಮ ಖಾತೆಗೆ ಹಣ ಜಮಾ ಆಗಿದೆಯೇ ಎಂದು ಚೆಕ್ ಮಾಡಲು ಬ್ಯಾಂಕ್ ಮುಂದೆ ಕ್ಯೂ ನಿಂತ ಘಟನೆ ಚಿಕ್ಕಮಗಳೂರು ನಗರದ ಎಂ.ಜಿ.ರಸ್ತೆಯಲ್ಲಿರುವ ಐಡಿಬಿಐ ಬ್ಯಾಂಕ್ ಬಳಿ ನಡೆದಿದೆ.
ಸುಮಾರು 600ಕ್ಕೂ ಹೆಚ್ಚು ಮಹಿಳೆಯರು ಏಕಕಾಲದಲ್ಲಿ ಬ್ಯಾಂಕ್ ಮುಂದೆ ಜಮಾಯಿಸಿದ್ದು, ಕೈಯಲ್ಲಿ ಪಾಸ್ ಬುಕ್ ಹಿಡಿದು, ಪಾಸ್ ಬುಕ್ ಎಂಟ್ರಿ ಮೆಷಿನ್ ಬಳಿ ಸರದಿ ಸಾಲಿನಲ್ಲಿ ನಿಂತಿದ್ದಾರೆ.
ಗೃಹ ಲಕ್ಷ್ಮೀ ಯೋಜನೆಯ ಹಣ ಬಂದಿರುವ ಬಗ್ಗೆ ಮೊಬೈಲಿಗೆ ಮೆಸೇಜ್ ಬಾರದ ಕಾರಣ ಈ ಗೊಂದಲ ಸೃಷ್ಟಿಯಾಗಿತ್ತು. ಖಾತೆಗೆ ಹಣ ಬಂದಿದೆಯೋ ಇಲ್ಲವೋ ಅಂತ ಚೆಕ್ ಮಾಡಲು ಮಹಿಳೆಯರು ಬ್ಯಾಂಕ್ ಮುಂದೆ ಸಾಲುಗಟ್ಟಿನಿಂತಿದ್ದಾರೆ.
ಬ್ಯಾಂಕ್ ಮುಂದೆ ನೆರೆದ ಮಹಿಳೆಯರನ್ನು ನಿಯಂತ್ರಿಸಲು ಪೊಲೀಸರು ಹಾಗೂ ಸೆಕ್ಯೂರಿಟಿ ಗಾರ್ಡ್ ಹರಸಾಹಸಪಡುವಂತಾಯಿತು.